ಹೊಸದಿಗಂತ ಡಿಜಿಟಲ್ ಡೆಸ್ಕ್:
ಹರಿಯಾಣದ ಕುರುಕ್ಷೇತ್ರ-ಕೈತಾಲ್ ರಸ್ತೆಯಲ್ಲಿ ಇಂದು ಬೆಳಗ್ಗೆ ಎರಡು ಕಾರುಗಳ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಈ ದುರಂತದಲ್ಲಿ ಕಾರಿನಲ್ಲಿದ್ದ ಐವರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರನ್ನು ಪ್ರವೀಣ್, ಪವನ್, ಅವರ ಪತ್ನಿ ಉರ್ಮಿಳಾ, ರಾಜೇಂದ್ರ ಮತ್ತು ಸುಮನ್ ಎಂದು ಗುರುತಿಸಲಾಗಿದೆ. ಘಟನೆ ನಡೆದ ಸಮಯದಲ್ಲಿ ಅವರು ಟಾಟಾ ಹ್ಯಾರಿಯರ್ ಕಾರಿನಲ್ಲಿ ಅಂಬಾಲಾ ಕಡೆಗೆ ತೆರಳುತ್ತಿದ್ದಾಗ, ಎದುರಿಗೆ ಮಾರುತಿ ಸ್ವಿಫ್ಟ್ ಕಾರು ಬಂದಿದ್ದು ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಈ ಡಿಕ್ಕಿಯ ಪರಿಣಾಮವಾಗಿ ಎರಡು ಕಾರುಗಳೂ ಸಂಪೂರ್ಣವಾಗಿ ಜಖಂಗೊಂಡಿವೆ.
ಸ್ಥಳೀಯರು ತಕ್ಷಣ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳ ವರದಿ ಪ್ರಕಾರ, ವಾಹನಗಳು ಅತ್ಯಧಿಕ ವೇಗದಲ್ಲಿ ಚಲಿಸುತ್ತಿದ್ದ ಕಾರಣ ಅಪಘಾತ ಸಂಭವಿಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.