ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬೈ-ಪುಣೆ ಎಕ್ಸ್ಪ್ರೆಸ್ವೇಯಲ್ಲಿ ಶುಕ್ರವಾರ ಬೆಳಿಗ್ಗೆ ಬೋರ್ಘಾಟ್ ಬಳಿ ಅಪಘಾತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ ಮತ್ತು ಎಂಟು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈ ಪುಣೆ ಎಕ್ಸ್ಪ್ರೆಸ್ವೇಯಲ್ಲಿ ಹೋಗುತ್ತಿದ್ದ ಟ್ರಕ್ ಬ್ರೇಕ್ ಫೇಲ್ನಿಂದ ನಿಯಂತ್ರಣ ಕಳೆದುಕೊಂಡು ಎರಡು ವಾಹನಗಳು, ಕಾರು ಮತ್ತು ಕೋಳಿಗಳನ್ನು ಸಾಗಿಸುತ್ತಿದ್ದ ಟೆಂಪೋಗೆ ಡಿಕ್ಕಿ ಹೊಡೆದ ನಂತರ ಈ ಅಪಘಾತ ಸಂಭವಿಸಿದೆ. ಮುಂಜಾನೆ 4 ಗಂಟೆ ಸುಮಾರಿಗೆ ಘಟನೆ ನಡೆದಿದೆ.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಖೋಪೋಲಿ ಆಸ್ಪತ್ರೆಗೆ ರವಾನಿಸಲಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.