March 12, 2026
Thursday, March 12, 2026
spot_img

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಬೈಕ್ ಡಿಕ್ಕಿಯಾಗಿ ಪಾದಚಾರಿ ಸಾ*ವು

ಹೊಸದಿಗಂತ ಹುಬ್ಬಳ್ಳಿ:

ರಾಷ್ಟ್ರೀಯ ಹೆದ್ದಾರಿಯ ವರೂರು ಗ್ರಾಮದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಅಂದಾಜು 60 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಯಲ್ಲಪ್ಪ ಅಂಗಡಿ ಎಂಬ ಸವಾರ ತನ್ನ ಬೈಕ್‌ನಲ್ಲಿ ಹುಬ್ಬಳ್ಳಿಯಿಂದ ಹಾವೇರಿ ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ವರೂರು ಗ್ರಾಮದ ಹತ್ತಿರ ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬೈಕ್ ಬಲವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಪಾದಚಾರಿ ಗಂಭೀರವಾಗಿ ಗಾಯಗೊಂಡಿದ್ದರು.

ತಕ್ಷಣವೇ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೆಎಂಸಿಆರ್‌ಐ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ದುರದೃಷ್ಟವಶಾತ್ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರು ಮಾರ್ಗಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ. ಸದ್ಯಕ್ಕೆ ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.

ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !