ಹೊಸದಿಗಂತ ವರದಿ,ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಪೆರಿಯಶಾಂತಿ ರಾಷ್ಟ್ರೀಯ ಹೆದ್ದಾರಿ ೭೫ ರಲ್ಲಿ ಭಾನುವಾರ ರಾತ್ರಿ ಕಾರು – ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ರಿಕ್ಷಾ ಚಾಲಕ ಪ್ರಭಾಕರ (೪೦) ಎಂಬವರು ಸಾವನ್ನಪ್ಪಿದ್ದಾರೆ.
ಮೃತ ಪ್ರಭಾಕರ ಅಡ್ಡೋಳೆ ಸಮೀಪದ ಪೇರಮಜಲು ನಿವಾಸಿ ಎಂದು ತಿಳಿಯಲಾಗಿದ್ದು, ನೆಲ್ಯಾಡಿಯಿಂದ ಗುಂಡ್ಯದತ್ತ ಪ್ರಯಾಣಿಸುತ್ತಿದ್ದಾಗ ಬೆಂಗಳೂರಿನಿಂದ ಮಂಗಳೂರಿನತ್ತ ಸಂಚರಿಸುತ್ತಿದ್ದ ಕಾರು ಡಿಕ್ಕಿ ಹೊಡೆಯಿತು.
ಡಿಕ್ಕಿ ರಭಸಕ್ಕೆ ರಿಕ್ಷಾದಿಂದ ರಸ್ತೆಗೆ ಎಸೆಯಲ್ಪಟ್ಟ ಚಾಲಕ ಪ್ರಭಾಕರ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದರೆಂದು ತಿಳಿದುಬಂದಿದೆ.
ಉಪ್ಪಿನಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ.