ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಾರಿಯೊಂದಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಆರು ಜನ ಸಾವನ್ನಪ್ಪಿರುವ ಘಟನೆ ಮಥುರಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ನಡೆದಿದೆ.
ಮೃತರನ್ನು ಹರ್ಲಾಲ್‌ಪುರ ಗ್ರಾಮದ ನಿವಾಸಿ ಧರ್ಮವೀರ್ ಸಿಂಗ್, ಅವರ ಮಕ್ಕಳಾದ ರೋಹಿತ್ ಮತ್ತು ಆರ್ಯನ್, ರೋಹಿತ್‌ನ ಸ್ನೇಹಿತ, ದಲ್ವೀರ್ ಹಾಗೂ ಅವರ ಸಹೋದರ ಪರಾಸ್ ಸಿಂಗ್ ತೋಮರ್ ಎಂದು ಗುರುತಿಸಲಾಗಿದೆ.
ಇಂದು ಬೆಳಗ್ಗೆ ಈ ಅವಘಡ ಸಂಭವಿಸಿದೆ. ಇಕೋ ಕಾರಲ್ಲಿ ಧರ್ಮವೀರ್ ಸಿಂಗ್ ದೆಹಲಿಯಿಂದ ಆಗ್ರಾಕ್ಕೆ ತೆರಳುತ್ತಿದ್ದರು. ಈ ವೇಳೆ ಮುಂದೆ ಹೋಗುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಆರು ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 10 ಜನರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.