Sunday, December 28, 2025

ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: ಎರಡು ಕಾರುಗಳು ಸುಟ್ಟು ಭಸ್ಮ, ಪ್ರಯಾಣಿಕರು ಪಾರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಪ್ರದೇಶದ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದು ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಜೆವರ್‌ನಿಂದ ನೋಯ್ಡಾ ಕಡೆಗೆ ಸಾಗುತ್ತಿದ್ದ ವಾಹನಗಳು ರಬುಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪರಸ್ಪರ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ತಕ್ಷಣವೇ ಎರಡೂ ಕಾರುಗಳಿಗೆ ಬೆಂಕಿ ಆವರಿಸಿದ್ದು, ಕೆಲವೇ ಕ್ಷಣಗಳಲ್ಲಿ ವಾಹನಗಳು ಸಂಪೂರ್ಣವಾಗಿ ಹೊತ್ತಿ ಉರಿದವು. ಅಪಘಾತದ ತೀವ್ರತೆಯನ್ನು ಅರಿತ ಸವಾರರು ತಕ್ಷಣವೆ ವಾಹನಗಳಿಂದ ಹೊರಬಂದು ಪ್ರಾಣಾಪಾಯದಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಈ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:

ಅಪಘಾತದ ಮಾಹಿತಿ ದೊರಕುತ್ತಿದ್ದಂತೆ ಸ್ಥಳಕ್ಕೆ ರಬುಪುರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಆದರೆ, ಆಗಾಗಲೇ ಕಾರುಗಳು ಸಂಪೂರ್ಣವಾಗಿ ಸುಟ್ಟು ಹೋಗಿದ್ದವು. ಘಟನೆಯಿಂದ ಕೆಲಕಾಲ ಎಕ್ಸ್‌ಪ್ರೆಸ್‌ವೇಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು.

error: Content is protected !!