ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋರ್ಟ್ ಆವರಣದಲ್ಲೇ ವಕೀಲರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಆನೇಕಲ್ ಗಡಿ ಹೊಸೂರಿನಲ್ಲಿ ನಡೆದಿದೆ.
ಮಚ್ಚಿನಿಂದ ಕೊಚ್ಚಿ ಕೊಲೆಗೆ ಯತ್ನ ನಡೆದಿದೆ. ಕಣ್ಣನ್, ಕೋರ್ಟ್ ಆವರಣದಲ್ಲಿ ಹಲ್ಲೆಗೊಳಗಾದ ವಕೀಲ. ಆನಂದ್ ಎಂಬಾತ ಮಚ್ಚಿನಿಂದ ಕೊಚ್ಚಿ ಹಲ್ಲೆ ಮಾಡಿದ್ದಾನೆ. ಅನೈತಿಕ ಸಂಬಂಧ ಹಿನ್ನೆಲೆ ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಕೇಳಿಬಂದಿದೆ.
ನ್ಯಾಯಾಲಯದ ಆವರಣದಲ್ಲಿ ವಕೀಲ ಕಣ್ಣನ್ ಮೇಲೆ ಹಲ್ಲೇ ಮಾಡಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗಿದೆ. ಹಲ್ಲೆ ಖಂಡಿಸಿ ರಸ್ತೆಯಲ್ಲಿ ಕುಳಿತು ವಕೀಲರು ಪ್ರತಿಭಟನೆ ಮಾಡಿದ್ದಾರೆ. ಆರೋಪಿಗೆ ತಕ್ಕ ಶಿಕ್ಷೆ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.