ACCIDENT | ಜಾರ್ಖಂಡ್‌ನಲ್ಲಿ ಭೀಕರ ಬಸ್‌ ಅಪಘಾತ: ಏಳು ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯಲ್ಲಿ ಪ್ರಯಾಣಿಕರೊಂದಿಗೆ ಪಾಟ್ನಾಗೆ ತೆರಳುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಕನಿಷ್ಠ ಏಳು ಜನರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿಮೀ ದೂರದಲ್ಲಿರುವ ಗೋರ್ಹರ್ ಪೊಲೀಸ್ ಠಾಣೆಯ ಬಳಿ ಈ ಘಟನೆ ಸಂಭವಿಸಿದ್ದು, ತಿರುವು ತೆಗೆದುಕೊಳ್ಳುವಾಗ ಬಸ್ ಪಲ್ಟಿಯಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದುವರೆಗೆ ಏಳು ಜನರು ಮೃತಪಟ್ಟಿದ್ದಾರೆ. ಇನ್ನೂ ಕೆಲವರು ಬಸ್ಸಿನಲ್ಲಿ ಸಿಲುಕಿರುವ ಸಾಧ್ಯತೆಯಿದೆ ಎಂದು ಹಜಾರಿಬಾಗ್ ಎಸ್ಪಿ ಅರವಿಂದ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!