ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೊಲಿವಿಯನ್ ಹೆದ್ದಾರಿಯಲ್ಲಿ ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿ ಕನಿಷ್ಠ 22 ಜನರು ಸಾವನ್ನಪ್ಪಿದ್ದಾರೆ ಮತ್ತು 16 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಪ್ರಾಣ ಕಳೆದುಕೊಂಡವರಲ್ಲಿ 14 ಮಂದಿಯ ಗುರುತು ಪತ್ತೆಯಾಗಿದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರಲ್ಲಿ ಚಿಲಿಯ ಪ್ರಜೆಯೂ ಸೇರಿದ್ದಾನೆ ಎಂದು ಚಿಲಿಯ ವಿದೇಶಾಂಗ ಸಚಿವಾಲಯ ತಿಳಿಸಿದೆ.
ಬೊಲಿವಿಯಾದ ಪಟಕಾಮಯ ಪಟ್ಟಣ ಮತ್ತು ಉತ್ತರ ಚಿಲಿಯ ಟ್ಯಾಂಬೊ ಕ್ವೆಮಾಡೊ ಪಟ್ಟಣದ ನಡುವಿನ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ.
ಬಸ್ ಎರಡು ದಕ್ಷಿಣ ಅಮೆರಿಕಾದ ರಾಷ್ಟ್ರಗಳನ್ನು ಸಂಪರ್ಕಿಸುವ ಮಾರ್ಗದಲ್ಲಿ ಸಾಗುತ್ತಿತ್ತು, ಅದು ಚಿಲಿ ಕಡೆಗೆ ಹೋಗುತ್ತಿತ್ತು ಎಂದು ತಿಳಿಸಲಾಗಿದೆ.