ಪುಣೆಯಲ್ಲಿ ಭೀಕರ ರಸ್ತೆ ಅಪಘಾತ: ಆರು ಮಂದಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪುಣೆ ಜಿಲ್ಲೆಯ ಅಹ್ಮದ್‌ನಗರ-ಕಲ್ಯಾಣ ಹೆದ್ದಾರಿಯಲ್ಲಿ ಮಂಗಳವಾರ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಆರು ಮಂದಿ ಮೃತಪಟ್ಟಿದ್ದಾರೆ.

ಟ್ರಕ್, ಸರ್ಕಾರಿ ಬಸ್ ಹಾಗೂ ಕಾರ್ ನಡುವೆ ಅಪಘಾತ ಸಂಭವಿಸಿದೆ. ಧವಲ್ಪುರಿ ಘಾಟ್ ಬಳಿ ಮುಂಜಾನೆ 2:30ಕ್ಕೆ ಅಪಘಾತ ಸಂಭವಿಸಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಾಯಗೊಂಡವರಲ್ಲಿ ಆರು ಮಂದಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಮೃತರ ಗುರುತು ಈವರೆಗೂ ಪತ್ತೆಯಾಗಿಲ್ಲ. ಮೂರು ವಾಹನಗಳ ನಡುವೆ ಡಿಕ್ಕಿಯಾಗಿದ್ದು, ಅಪಘಾತಕ್ಕೆ ಕಾರಣ ತಿಳಿದುಬಂದಿಲ್ಲ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!