Sunday, December 21, 2025

ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ: ಎರಡು ಬಸ್‌ಗಳು ಮುಖಾಮುಖಿ ಡಿಕ್ಕಿ, 10 ಮಂದಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡಿನ ಶಿವಗಂಗಾ ಜಿಲ್ಲೆಯ ಕುಮ್ಮನಗುಡಿಯಲ್ಲಿ ಎರಡು ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ ಕನಿಷ್ಠ 10 ಮಂದಿ ಮೃತಪಟ್ಟು 20 ಮಂದಿ ಗಾಯಗೊಂಡ ಘಟನೆ ನಡೆದಿದೆ.

ಈ ಭೀಕರ ಅಪಘಾತ ತಿರುಪತ್ತೂರ್‌ನ ಪಿಲ್ಲೈಯಾರ್‌ಪಟ್ಟಿಯಿಂದ ಸುಮಾರು 5 ಕಿ.ಮೀ. ದೂರದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಸ್ಥಳದಲ್ಲೆ ಅಗ್ನಿ ಶಾಮಕ ದಳದ ಸಿಬ್ಬಂದಿ, ಪೊಲೀಸರು ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಡಿಕ್ಕಿಯಾದ ಬಸ್‌ಗಳ ಪೈಕಿ 1 ತಿರುಪ್ಪೂರ್‌ನಿಂದ ಕರೈಕುಡಿಗೆ ಮತ್ತೊಂದು ಕರೈಕುಡಿಯಿಂದ ದಿಂಡಿಗಲ್‌ಗೆ ತೆರಳುತ್ತಿತ್ತು.

ಮೃತದೇಹಗಳು ರಸ್ತೆ ಮೇಲೆ ಅಲ್ಲಲ್ಲಿ ಬಿದ್ದಿರುವ ದೃಶ್ಯ ಮನ ಕಲಕುವಂತಿದೆ. ಅಪಘಾತಕ್ಕೆ ಕಾರಣ ತಿಳಿದು ಬಂದಿಲ್ಲ. ತನಿಖೆ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ.

ನೆರವಿಗೆ ಧಾವಿಸಿದ ಸ್ಥಳೀಯರು
ಅಪಘಾತದ ಬಳಿಕ ನುಜ್ಜುಗುಜ್ಜಾದ ಬಸ್‌ನೊಳಗೆ ಸಿಲುಕಿಕೊಂಡ ಹಲವರು ಸ್ಥಳೀಯರು ರಕ್ಷಿಸಿದ್ದಾರೆ. ಸದ್ಯ ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌ ಆಗಿದ್ದು ವಾಹನಗಳಿಗೆ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸೂಚಿಸಲಾಗಿದೆ.

error: Content is protected !!