ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಹರ್ದೋಯ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ಮುಂಜಾನೆ 3 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಮದುವೆ ಸಮಾರಂಭ ಮುಗಿಸಿ ಹಿಂತಿರುಗುತ್ತಿದ್ದ ಬೊಲೆರೊ ವಾಹನ ನಿಂತಿದ್ದ ಖಾಸಗಿ ಬಸ್ಗೆ ಡಿಕ್ಕಿ ಹೊಡೆದಿದೆ. ಬಸ್ ನಲ್ಲಿಯೂ ಮದುವೆ ಸಮಾರಂಭಕ್ಕೆ ತೆರಳಿದ್ದ ಜನರದಿದ್ದರು ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಬೊಲೆರೊದ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ಮಾಹಿತಿ ತಿಳಿದು ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಗಾಯಾಳುಗಳನ್ನು ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಬೊಲೆರೊ ನಿಯಂತ್ರಣ ಕಳೆದುಕೊಂಡು ನಿಂತಿದ್ದ ಬಸ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಲ್ಲಿ ಐವರು ಸಾವನ್ನಪ್ಪಿದ್ದಾರೆ. ಗಾಯಗೊಂಡ ನಾಲ್ವರನ್ನು ತಕ್ಷಣ ಚಿಕಿತ್ಸೆಗಾಗಿ ಲಖೌನಾಗೆ ರವಾನಿಸಲಾಗಿದೆ. ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ, ಆದರೆ ಯಾರಿಗೂ ಗಂಭೀರ ಗಾಯಗಳಾಗಿಲ್ಲ . ಸಂತ್ರಸ್ತರ ಕುಟುಂಬದವರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರ್ ನೃಪೇಂದ್ರ ಕುಮಾರ್ ತಿಳಿಸಿದ್ದಾರೆ.