ACCIDENT | ಹಬ್ಬ ಮುಗಿಸಿ ಮನೆಗೆ ವಾಪಾಸಾಗುತ್ತಿದ್ದ ಕುಟುಂಬ: ಭೀಕರ ಅಪಘಾತಕ್ಕೆ ತಂದೆ-ಮಗಳು ಬಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಂಕ್ರಾಂತಿ ಹಬ್ಬ ಮುಗಿಸಿ ಬೆಂಗಳೂರು ಸಿಟಿಗೆ ವಾಪಾಸಾಗುತ್ತಿದ್ದ ಕುಟುಂಬವೊಂದು ಭೀಕರ ಅಪಘಾತಕ್ಕೆ ತುತ್ತಾಗಿದೆ.

ಸ್ಕೂಟಿಯಲ್ಲಿ ತಂದೆ, ತಾಯಿ ಹಾಗೂ ನಾಲ್ಕು ವರ್ಷದ ಮಗಳು ಪ್ರಯಾಣಿಸುತ್ತಿದ್ದು, ನೆಲಮಂಗಲದ ಅಡಕಿಮಾರನಹಳ್ಳಿಯ ಫ್ಲೈಓವರ್ ಬಳಿ ಅಪಘಾತ ಸಂಭವಿಸಿದೆ. ಸ್ಥಳದಲ್ಲೇ ತಂದೆ ಮಗಳು ಮೃತಪಟ್ಟಿದ್ದು, ತಾಯಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರು ಗುರುತು ಇನ್ನೂ ಪತ್ತೆಯಾಗಿಲ್ಲ. ಅಪಘಾತ ಆಗಿದ್ದು ಹೇಗೆ ಎನ್ನುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!