ಮದುವೆಗೆ ಅಪ್ಪ ಅಮ್ಮ ಒಪ್ತಿಲ್ಲ, ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಲವರ್ಸ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮನೆಯವರು ಮದುವೆಗೆ ಒಪ್ಪದ ಹಿನ್ನೆಲೆ ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಬಾಗಲಕೋಟೆಯ ರಬಕವಿ ಬನಹಟ್ಟಿ ತಾಲ್ಲೂಕಿನ ನಂದಗಾಂವ ಗ್ರಾಮದಲ್ಲಿ ಘಟನೆ ನಡೆದಿದೆ. ಸಚಿನ್ ದಳವಾಯಿ(22), ಪ್ರಿಯಾ ಮಡಿವಾಳರ(19) ಮೃತ ಪ್ರೇಮಿಗಳು.

ಸಚಿನ್‌ ದಳವಾಯಿ, ಪ್ರಿಯಾ ಮಡಿವಾಳರ ಬಹಳ ದಿನಗಳಿಂದ ಪ್ರೀತಿಸುತ್ತಿದ್ದರು. ಇಬ್ಬರು ಪರಸ್ಪರ ಮದುವೆಯಾಗಿ ಹೊಸ ಜೀವನ ಪ್ರಾರಂಭಿಸಬೇಕು ಎಂದು ನಿರ್ಧಾರ ತೆಗೆದುಕೊಂಡಿದ್ದರು. ಆದ್ರೆ ಸಚಿನ್‌ ಮನೆಯಲ್ಲಿ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಈ ವಿಷಯವನ್ನು ಸಚಿನ್‌ ಪ್ರಿಯಾಳಿಗೆ ತಿಳಿಸಿದ್ದಾನೆ. ಇದರಿಂದ ಮನನೊಂದ ಪ್ರೇಮಿಗಳು ಗುರುವಾರ ರಾತ್ರಿ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!