ಕಣ್ಣೀರಿಡುತ್ತಾ ಕೈ-ಕೈ ಹಿಡಿದುಕೊಂಡು ರೈಲಿಗೆ ತಲೆಕೊಟ್ಟ ಅಪ್ಪ-ಮಗ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕಣ್ಣೀರಿಡುತ್ತಾ ಕೈ-ಕೈ ಹಿಡಿದುಕೊಂಡು ನಡೆದುಕೊಂಡು ಬಂದ ಅಪ್ಪ ಮಗ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆಯ ಭಯಾನಕ ವಿಡಿಯೋ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದೆ.

ಮುಂಬೈನ ಬಯಂದರ್ ನಿಲ್ದಾಣದ ಬಳಿ ತಂದೆ ಮಗ ಮಾಮೂಲಾಗಿಯೇ ಮಾತನಾಡಿಕೊಂಡು ಬಂದಿದ್ದಾರೆ. ಇನ್ನೇನು ರೈಲು ಬರುತ್ತಿದೆ ಎಂದು ದೂರದಿಂದ ನೋಡಿದ ಅಪ್ಪ ಮಗ, ಕೈ ಕೈ ಹಿಡಿದುಕೊಂಡು ಕಣ್ಣೀರಿಡುತ್ತಾ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.

ವಸೈ ನಿವಾಸಿಯಾದ 60 ವರ್ಷದ ಹರೀಶ್ ಮೆಹ್ತಾ ಹಾಗೂ 35 ವರ್ಷದ ಪುತ್ರ ಜಯ್ ಮೆಹ್ತಾ ಈ ಘಟನೆಯಲ್ಲಿ ಮೃತಪಟ್ಟಿದ್ದಾರೆ. ಬೆಳಗ್ಗೆ 9.30ರ ವೇಳೆಗೆ ಅಪ್ಪ ಮಗ ರೈಲಿನ ಹಳಿಗಳ ಮೇಲೆ ಮಲಗಿದ್ದು, ರೈಲು ಹರಿದು ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಆಗಮಿಸಿದ ರೈಲ್ವೇ ಪೊಲೀಸರು ಸ್ಥಳ ಮಹಜರು ಮಾಡಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಇವರ ಸಾವಿಗೆ ಕಾರಣ ಸ್ಪಷ್ಟವಾಗಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!