ಹೊಸದಿಗಂತ ಡಿಜಿಟಲ್ ಡೆಸ್ಕ್:
ಪತ್ನಿಯೊಂದಿಗೆ ಜಗಳ ಮಾಡಿ ತನ್ನ ಐದು ತಿಂಗಳ ಮಗುವಿನ ಕೈ-ಕಾಲು ಮುರಿದು ಕೊಲ್ಲಲು ಯತ್ನಿಸಿದ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.
ಅಸ್ಸಾಂನ ಗುವಾಹಟಿಯಲ್ಲಿ ವ್ಯಕ್ತಿ ತನ್ನ ಪತ್ನಿ ಜೊತೆ ಜಗಳವಾಡಿದ್ದಾನೆ, ಸಿಟ್ಟಿಗೆ ಪತ್ನಿ ಹಾಗೂ ಮಗುವಿನ ಮೇಲೆ ಹಲ್ಲೆ ಮಾಡಿದ್ದಾನೆ. ತಾಯಿ, ಮಗು ಇಬ್ಬರೂ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಗುವಿಗೆ ಕೆಲವು ಶಸ್ತ್ರಚಿಕಿತ್ಸೆಗಳು ನಡೆದಿವೆ. ಆತನ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.