ಗುಜರಾತ್‌ನಲ್ಲೊಂದು ಮನಕಲಕುವ ಘಟನೆ: ಮಗಳ ಕಾಲೇಜು ಶುಲ್ಕ ಕಟ್ಟಲಾಗದೆ ತಂದೆ ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬಡತನದಿಂದ ಮಗಳ ಕಾಲೇಜು ಶುಲ್ಕ ಕಟ್ಟಲಾಗದೆ ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಗುಜರಾತ್‌ನ ತಾಪಿಯಲ್ಲಿ ನಡೆದಿದೆ. ಗೊಡ್ಡಾ ಗ್ರಾಮದ ಬಕುಲ್ ಪಟೇಲ್ ಎಂಬ ವ್ಯಕ್ತಿ ಕ್ರಿಮಿನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತನಿಖೆ ವೇಳೆ ಮಗಳ ಕಾಲೇಜು ಶುಲ್ಕ ಕಟ್ಟಲಾಗದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಬಹಿರಂಗಪಡಿಸಿದ್ದಾರೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ಈ ಘಟನೆ ರಾಜ್ಯದಲ್ಲಿ ಸಂಚಲನ ಮೂಡಿಸುತ್ತಿದೆ.

ಈ ಘಟನೆಯ ಹಿನ್ನೆಲೆಯಲ್ಲಿ ಗುಜರಾತ್ ನಲ್ಲಿ ರಾಜಕೀಯ ಬಿಸಿ ಜೋರಾಗಿದೆ. ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಆಡಳಿತಾರೂಢ ಬಿಜೆಪಿಯನ್ನು ಟೀಕಿಸಿದ್ದಾರೆ. 21ನೇ ಶತಮಾನದಲ್ಲಿ ಇಂತಹ ಘಟನೆ ನಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!