ಹೊಸದಿಗಂತ ಡಿಜಿಟಲ್ ಡೆಸ್ಕ್:
ತನ್ನ ಇಬ್ಬರು ಪುಟ್ಟ ಮಕ್ಕಳೊಂದಿಗೆ ತಂದೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಧುಮ್ಮನಸೂರ್ ಗ್ರಾಮದಲ್ಲಿ ನಡೆದಿದೆ.
ಆಟೋ ಚಾಲಕ ಅಂಕುಶ್ ಹುಚ್ಚೇನೂರ್(28) ಅವರು ತಮ್ಮ ಇಬ್ಬರು ಮಕ್ಕಳಾದ ತನು(೦6) ಮತ್ತು ಸಾಯಿರಾಜ್ (೦5) ಅವರೊಂದಿಗೆ ಬಾವಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ.
ಹುಮನಾಬಾದ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಕಾರ್ಯಚರಣೆ ನಡೆಸಿ ಮೃತದೇಹಗಳನ್ನು ಮೇಲೆತ್ತಿದ್ದಾರೆ. ಕೌಟುಂಬಿಕ ಕಲಹವೇ ಈ ಕೃತ್ಯಕ್ಕೆ ಕಾರಣ ಎಂದು ಹೇಳಲಾಗಿದೆ.