ಟ್ರಾನ್ಸ್ ಫಾರ್ಮ ಸ್ಫೋಟದಲ್ಲಿ ತಂದೆ-ಮಗಳು ಸಾವು: ಸರ್ಕಾರದಿಂದ 10 ಲಕ್ಷ ಪರಿಹಾರ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಬೆಂಗಳೂರು ನಗರದಲ್ಲಿನ ಮಂಗನಹಳ್ಳಿಯಲ್ಲಿ ಟ್ರಾನ್ಸ್ ಫಾರ್ಮರ್ ಸ್ಪೋಟಗೊಂಡು ತಂದೆ-ಮಗಳು ಸಾವನ್ನಪ್ಪಿದ್ದು, ರಾಜ್ಯ ಸರ್ಕಾರದಿಂದ ಮೃತ ಕುಟುಂಬಸ್ಥರಿಗೆ ತಲಾ 10 ಲಕ್ಷ ಪರಿಹಾರವನ್ನು ಘೋಷಣೆ ಮಾಡಿದೆ.
ಈ ಬಗ್ಗೆ ವಿಧಾನ ಪರಿಷತ್ ನಲ್ಲಿ ಸದಸ್ಯ ಮಂಜುನಾಥ್ ಭಂಡಾರಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಇಂಧನ ಸಚಿವ ವಿ.ಸುನೀಲ್ ಕುಮಾರ್ , ಮಂಗನಹಳ್ಳಿಯಲ್ಲಿ ಟ್ರಾನ್ಸ್ ಫಾರ್ಮರ್ ಸ್ಪೋಟದಂತ ಘಟನೆ ನಡೆಯಬಾರದಾಗಿತ್ತು. ಈ ದುರಂತಕ್ಕಾಗಿ ತೀವ್ರ ವಿಷಾದ ವ್ಯಕ್ತ ಪಡಿಸುತ್ತೇನೆ. ಈ ಪ್ರಕರಣದಲ್ಲಿ ಮೃತಪಟ್ಟಂತ ತಂದೆ-ಮಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂಬುದಾಗಿ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!