ಮಗನ ಕೈಗೆ ಸ್ಕೂಟಿ ಕೊಟ್ಟು ತಪ್ಪು ಮಾಡಿದ ತಂದೆ, 26 ಸಾವಿರ ರೂ. ದಂಡ ವಿಧಿಸಿದ ಕೋರ್ಟ್​

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಲೈಸೆನ್ಸ್ ಹೊಂದಿರದ, ಅಪ್ರಾಪ್ತ ವಯಸ್ಸಿನ ಬಾಲಕನೋರ್ವ ಸ್ಕೂಟರ್ ಚಲಾಯಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಪರಿಣಾಮ, ಆತನ ತಂದೆ 26,000 ರೂಪಾಯಿ ದಂಡ ಕಟ್ಟಿದ ಘಟನೆ ಬಂಟ್ವಾಳದಲ್ಲಿ ಬುಧವಾರ ನಡೆದಿದೆ.

ಎರಡು ದಿನಗಳ ಹಿಂದೆ ಬಂಟ್ವಾಳ ಸಂಚಾರ ಠಾಣಾ ಪೊಲೀಸರು ಎಸ್. ಐ. ಸುತೇಶ್ ನೇತೃತ್ವದಲ್ಲಿ ಅಲ್ಲಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭ ಬಾಲಕನೋರ್ವ ಪರ್ಲಿಯಾ ಸಮೀಪ ಸ್ಕೂಟರ್ ಚಲಾಯಿಸಿಕೊಂಡು ಬರುತ್ತಿರುವುದು ಕಂಡುಬಂದಿದೆ.

ಆಗ ಆತನನ್ನು ನಿಲ್ಲಿಸಿ ವಿಚಾರಿಸಿದಾಗ ಅಪ್ರಾಪ್ತ ವಯಸ್ಕನಾಗಿದ್ದು, ಲೈಸನ್ಸ್ ಇಲ್ಲದಿರುವುದು ಗೊತ್ತಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಬಳಿಕ ಬಾಲಕನ ತಂದೆ, ಸಮೀರ್ ಎಂಬವರಿಗೆ ಬಂಟ್ವಾಳ ಜೆಎಂಎಫ್ ಸಿ ಕೋರ್ಟಿನ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ನಿಯಮ ಉಲ್ಲಂಘಿಸಿದ್ದಕ್ಕಾಗಿ 26 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!