ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾತ್ಮಾ ಗಾಂಧಿ ಅವರ 77ನೇ ಪುಣ್ಯತಿಥಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶ್ರದ್ಧಾಂಜಲಿ ಸಲ್ಲಿಸಿದರು.
“ಪೂಜ್ಯ ಬಾಪು ಅವರಿಗೆ ಅವರ ಪುಣ್ಯ ತಿಥಿಯಂದು ನಮನಗಳು. ಅವರ ಆದರ್ಶಗಳು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ನಮ್ಮನ್ನು ಪ್ರೇರೇಪಿಸುತ್ತವೆ. ನಾನು ನಮ್ಮ ರಾಷ್ಟ್ರಕ್ಕಾಗಿ ಹುತಾತ್ಮರಾದ ಎಲ್ಲರಿಗೂ ಗೌರವ ಸಲ್ಲಿಸುತ್ತೇನೆ ಮತ್ತು ಅವರ ಸೇವೆ ಮತ್ತು ತ್ಯಾಗವನ್ನು ಸ್ಮರಿಸುತ್ತೇನೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಮಹಾತ್ಮ ಗಾಂಧಿಯವರ ಪುಣ್ಯತಿಥಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಸ್ವಚ್ಛತೆ, ಸ್ವಾವಲಂಬನೆ ಮತ್ತು ಗ್ರಾಮೀಣ ಭಾರತದ ಸಬಲೀಕರಣದ ಕಡೆಗೆ ಅವರ ಆಲೋಚನೆಗಳು ದೇಶವಾಸಿಗಳಿಗೆ ಸ್ಫೂರ್ತಿ ನೀಡುವುದನ್ನು ಮುಂದುವರಿಸುತ್ತದೆ ಎಂದು ಶಾ ಹೇಳಿದ್ದಾರೆ.