Saturday, January 10, 2026

ತಂದೆಯಿಂದಲೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ: ಪುತ್ತೂರು ಮಹಿಳಾ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು

ಹೊಸದಿಗಂತ ವರದಿ ಪುತ್ತೂರು:

ತಂದೆಯಿಂದಲೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಆರೋಪದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ.

15 ವರ್ಷದ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಿ ನೀಡಲಾದ ದೂರಿನ ಮೇರೆಗೆ ಬಶೀ‌ರ್ (40) ಎಂಬಾತನ ವಿರುದ್ದ ಪೋಕೋ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ನೊಂದ ಬಾಲಕಿ ಮಂಗಳೂರು ಲೇಡಿಗೋಷನ್‌ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಇದನ್ನೂ ಓದಿ: Kitchen tips | ಅಡುಗೆ ಮನೆಯಲ್ಲಿ ಗ್ಯಾಸ್ ಲೀಕ್ ಆದ್ರೆ ಏನು ಮಾಡ್ಬೇಕು? ಈ ವಿಷ್ಯ ಸರಿಯಾಗಿ ತಿಳ್ಕೊಳಿ

error: Content is protected !!