ದರ್ಶನ್ ಗ್ಯಾಂಗ್ ಗೆ ಶುರುವಾಗಿದೆ ಭಯ: ನಾಳೆ ಸುಪ್ರೀಂ ಕೋರ್ಟ್‌ನಲ್ಲಿ ಭವಿಷ್ಯ ನಿರ್ಧಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್​ ಹಾಗೂ ಪವಿತ್ರಾ ಗೌಡ ಸೇರಿದಂತೆ ಕೆಲ ಆರೋಪಿಗಳಿಗೆ ಸಿಕ್ಕಿರುವ ಜಾಮೀನು ರದ್ದುಗೊಳಿಸುವಂತೆ ಬೆಂಗಳೂರು ಪೊಲೀಸ್ ಇಲಾಖೆ ಸುಪ್ರೀಂಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಿತ್ತು.

ಈ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಕೆಲ ದಿನಗಳ ಹಿಂದಷ್ಟೇ ಅಸ್ತು ಎಂದಿತ್ತು. ಇದೀಗ ಈ ಜಾಮೀನು ಅರ್ಜಿ ಸಂಬಂಧಿಸಿದಂತೆ ವಿಚಾರಣೆ ನಾಳೆ (ಏಪ್ರಿಲ್ 02) ಸುಪ್ರೀಂಕೋರ್ಟ್‌ನಲ್ಲಿ ನಡೆಯಲಿದೆ.

ಈ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಮತ್ತು ಇತರ ಐವರು ಆರೋಪಿಗಳ ಜಾಮೀನು ವಿಷಯವನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದೀವಾಲ ಮತ್ತು ಆರ್. ಮಹದೇವನ್ ಅವರ ಪೀಠವು ಪರಿಶೀಲಿಸಲಿದೆ.

ರಾಜ್ಯ ಸರ್ಕಾರದ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ ಲೂಥ್ರಾ ಸುಪ್ರೀಂಕೋರ್ಟ್‌ನಲ್ಲಿ ವಾದ ಮಂಡಿಸಲಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು ನೀಡಿರುವುದು ಸರಿಯಲ್ಲ, ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಬೇಕು ಎಂದು ಸರ್ಕಾರದ ಮನವಿಯಲ್ಲಿ ಒತ್ತಾಯಿಸಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!