October 14, 2026
Wednesday, October 14, 2026
spot_img

ದಾಂಡೇಲಿಯ ಪಟೇಲ್ ನಗರದಲ್ಲಿ ಆತಂಕ: ರುದ್ರಭೂಮಿ ಆವರಣದಲ್ಲಿ ಚಿರತೆ ಪ್ರತ್ಯಕ್ಷ

ಹೊಸದಿಗಂತ ವರದಿ ​ದಾಂಡೇಲಿ :

ನಗರದ ಪಟೇಲ್ ನಗರದಲ್ಲಿ ಶುಕ್ರವಾರ ಸಂಜೆ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಪಟೇಲ್ ನಗರದ ಹಿಂದೂ ರುದ್ರಭೂಮಿಯ ಆವರಣದಲ್ಲಿ ಚಿರತೆ ರಾಜನಡಿಗೆಯಲ್ಲಿ ಸಾಗುತ್ತಿರುವುದು ಕಂಡುಬಂದಿದೆ. ಜನವಸತಿ ಪ್ರದೇಶದ ಸಮೀಪವೇ ಚಿರತೆ ಕಾಣಿಸಿಕೊಂಡಿರುವುದು ನಿವಾಸಿಗಳಲ್ಲಿ ಭೀತಿ ಮೂಡಿಸಿದೆ.

ಈಗಾಗಲೇ ದಾಂಡೇಲಿ ಭಾಗದಲ್ಲಿ ಚಿರತೆ ಹಾಗೂ ಕಪ್ಪು ಚಿರತೆಗಳ ಸಂಚಾರದ ಕುರಿತು ಅರಣ್ಯ ಇಲಾಖೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದೆ. ಇತ್ತೀಚಿನ ದಿನಗಳಲ್ಲಿ ಹಸನ್ಮಾಳ, ಅಂಬೆವಾಡಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಕಪ್ಪು ಚಿರತೆ ಕಾಣಿಸಿಕೊಂಡಿದ್ದು, ಸಾಕುಪ್ರಾಣಿಗಳ ಮೇಲೆ ದಾಳಿ ನಡೆಸಿದ ಘಟನೆಗಳೂ ವರದಿಯಾಗಿವೆ.

ಈ ಹಿನ್ನೆಲೆಯಲ್ಲಿ ಪಟೇಲ್ ನಗರದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು

Must Read