ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೃಷ್ಣಾ ನದಿ ಪ್ರವಾಹ ಇಳಿಕೆಯಾಗದ ಕಾರಣ ಪರಿಸ್ಥಿತಿ ಎದುರಿಸಲು ಸದಾ ಸನ್ನದ್ಧವಾಗಿರುವಂತೆ ಅಧಿಕಾರಿಗಳಿಗೆ ಹಾಲಿ ಶಾಸಕ ಲಕ್ಷ್ಮಣ ಸವದಿ ಸೂಚನೆ ನೀಡಿದ್ದಾರೆ.
ಕೃಷ್ಣಾ ನದಿಯ ದಡದಲ್ಲಿರುವ ಗ್ರಾಮಗಳಿಗೆ ಪ್ರವಾಹ ಭೀತಿ ಶುರುವಾಗಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಪ್ರವಾಹದ ಸ್ಥಿತಿ ಭೀಕರವಾಗಿಯೂ ಇರಬಹುದು, ಎಲ್ಲವನ್ನು ಎದುರಿಸಲು ಸಿದ್ಧವಾಗೋಣ ಎಂದು ಹೇಳಿದ್ದಾರೆ.
ಸಭೆಯಲ್ಲಿ ಪ್ರವಾಹ ಪರಿಸ್ಥಿತಿ ಎದುರಿಸಲು ಸದಾ ಸನ್ನದ್ಧವಾಗಿರುವಂತೆ ಹೆಚ್ಚುವರಿ ಪುನರ್ವಸತಿ ಕೇಂದ್ರಗಳು, ವೈದ್ಯಕೀಯ ಉಪಕರಣಗಳು, ಔಷಧಿಗಳು, ಆಹಾರ ಉತ್ಪನ್ನ ಸೇರಿದಂತೆ ಎಲ್ಲಾ ರೀತಿಯ ಸಿದ್ಧತೆಗಳ ನಡೆಸುವಂತೆ ಸೂಚನೆ ನೀಡಿದರು.