spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಆಗಸ್ಟ್ ನಲ್ಲಿ ರಾಜ್ಯಕ್ಕೂ 3ನೇ ಅಲೆ ಅಪ್ಪಳಿಸುವ ಭೀತಿ: ಮುಂಜಾಗ್ರತೆ ಕೈಗೊಳ್ಳಿ ಎಂದ ಹೆಚ್.ಡಿ.ಕುಮಾರಸ್ವಾಮಿ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಒಂದೆಡೆ ಕೊರೋನಾ 3ನೇ ಅಲೆ ಭೀತಿ ಎದುರಾಗಿದೆ ಮತ್ತೊಂದೆಡೆ ಪ್ರವಾಹದಿಂದಾಗಿ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಸರ್ಕಾರ ಎಚ್ಚೆತ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಿ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರಿನ ಸೋಮಶೆಟ್ಟಿಹಳ್ಳಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಕೋವಿಡ್ 2ನೇ ಅಲೆ ಸಂದರ್ಭದಲ್ಲಿ ಲಾಕ್ ಡೌನ್ ಮಾಡುವಂತೆ ನಾನು ಹೇಳಿದ್ದೆ. ಆದರೆ ನಾನು ಕೊಟ್ಟ ಸಲಹೆಯನ್ನು ರಾಜ್ಯ ಸರ್ಕಾರ ನಿರ್ಲಕ್ಷ ಮಾಡಿತ್ತು. ಪರಿಣಾಮ ಅನಾಹುತಗಳನ್ನು ಎದುರಿಸಬೇಕಾಯಿತು. ಈಗ ಮೂರನೇ ಅಲೆ ಆರಂಭವಾಗುತ್ತಿದೆ ಈಗಲಾದರೂ ಸರ್ಕಾರ ಎಚ್ಚೆತ್ತು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಿ ಎಂದರು.
ನೆರೆ ರಾಜ್ಯ ಕೇರಳದಲ್ಲಿ ಕೊರೋನಾ 3ನೇ ಅಲೆ ಸ್ಫೋಟವಾಗಿದೆ. ರಾಜ್ಯದಲ್ಲೂ ಆಗಸ್ಟ್ ಮೊದಲ ಅಥವಾ ಎರಡನೇ ವಾರದಲ್ಲಿ ಮೂರನೇ ಅಲೆ ಆರಂಭವಾಗಲಿದೆ ಎಂದು ತಜ್ನರು ಎಚ್ಚರಿಸುತ್ತಿದ್ದಾರೆ. ರಾಜ್ಯದಲ್ಲಿ ಪ್ರತಿದಿನ 50-100 ಕೇಸ್ ಹೆಚ್ಚಾಗುತ್ತಿದೆ. ದೊಡ್ಡಮಟ್ಟದಲ್ಲಿ ಮೂರನೇ ಅಲೆ ಹರಡುವ ಮೊದಲು ಈಗಲೇ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಾದ ಅಗತ್ಯವಿದೆ ಎಂದು ಆಗ್ರಹಿಸಿದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss