ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ವರದಿ, ಮುಂಡಗೋಡ:
ತಾಲೂಕಿನ ಅರಶಿಣಗೇರಿ ಗ್ರಾಮದ ರೈತನೊಬ್ಬ ಸಾಲಕ್ಕೆ ಹೆದರಿ ಅರಣ್ಯದಲ್ಲಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಜರುಗಿದೆ.
ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ದೇವೀಂದ್ರಪ್ಪಾ ಈರಪ್ಪ ತೆಗ್ಗಳ್ಳಿ(60) ಎಂದು ತಿಳಿದು ಬಂದಿದೆ. ಈತನು ತನ್ನ ಗದ್ದೆಯಲ್ಲಿ ಶೇಂಗಾ ಬೆಳೆಗೆ ಖರ್ಚು ಮಾಡಿದ ಹಣ ಬರದಿರುವುದನ್ನು ಮನಸ್ಸಿಗೆ ಹಚ್ಚಿಕೊಂಡು, ಹಾಗೂ ಕೃಷಿಗಾಗಿ ವಿವಿಧ ಸೊಸೈಟಿಗಳಲ್ಲಿ ಮಾಡಿದ ಸಾಲವನ್ನು ತೀರಿಸಲಾಗದೆ. ಅದನ್ನೆ ಮನಸ್ಸಿಗೆ ಹಚ್ಚಿಕೊಂಡು ಅರಶಿಣಗೇರಿ ಅರಣ್ಯದ ಮರಕ್ಕೆ ನೇಣು ಬೀಗಿದುಕೊಂಡು ಆತ್ಮ ಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.