April 19, 2026
Sunday, April 19, 2026
spot_img

ಸೋಲಿನ ಭಯ ಕಾಡ್ತಿದೆ… ಅದಕ್ಕೆ ಯತ್ನಾಳ್‌ ಬಂದಿದ್ದು: ಬಿಜೆಪಿ ವಿರುದ್ಧ ಸಿಎಂ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಗಲಕೋಟೆ ಉಪಚುನಾವಣೆ ಕಣ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಪಕ್ಷಕ್ಕೆ ಸೋಲಿನ ಭಯ ಕಾಣಿಸಿಕೊಂಡ ಹಿನ್ನೆಲೆ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪ್ರಚಾರಕ್ಕೆ ಕರೆಸಲಾಗಿದೆ ಎಂದು ಸಿಎಂ ಆರೋಪಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಪ್ರಚಾರ ನಡೆಸಲು ಬಾಗಲಕೋಟೆಗೆ ಆಗಮಿಸಿದ ವೇಳೆ ಅವರು ಈ ಹೇಳಿಕೆ ನೀಡಿದ್ದಾರೆ. ಉಪಚುನಾವಣೆಯ ಕಾವು ಹೆಚ್ಚುತ್ತಿರುವಂತೆ ಎರಡೂ ಪಕ್ಷಗಳು ಆಕ್ರಮಣಕಾರಿ ಪ್ರಚಾರಕ್ಕೆ ಮುಂದಾಗಿವೆ.

ಇದನ್ನೂ ಓದಿ:

ಬಿಜೆಪಿ ನಾಯಕರು ಸುಳ್ಳು ಹೇಳುವುದರಲ್ಲಿ ಪರಿಣತರಾಗಿದ್ದಾರೆ ಎಂದು ಟೀಕಿಸಿದರು. ಪಕ್ಷದ ಒಳಗಿನ ಭಿನ್ನಮತ ಮತ್ತು ಹೀನಾಯ ಸ್ಥಿತಿ ಮುಚ್ಚಿಹಾಕಲು ಯತ್ನಾಳ್ ಅವರನ್ನು ಮತ್ತೆ ಮೈದಾನಕ್ಕಿಳಿಸಲಾಗಿದೆ ಎಂದು ಹೇಳಿದರು.

ಇದೇ ವೇಳೆ ಕೇಂದ್ರ ಸಚಿವ ವಿ. ಸೋಮಣ್ಣ ಅವರು “ಇನ್ನೂ ಕೆಲವೇ ದಿನಗಳಲ್ಲಿ ಸಿಎಂ ಬದಲಾಗುತ್ತಾರೆ” ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ಅವರು ನಮ್ಮ ಹೈಕಮಾಂಡ್ ಅಲ್ಲ. ಪಕ್ಷದ ಉನ್ನತ ನಾಯಕತ್ವ ಯಾವ ನಿರ್ಧಾರ ತೆಗೆದುಕೊಳ್ಳುತ್ತದೋ ಅದಕ್ಕೆ ನಾನು ಬದ್ಧ” ಎಂದು ತಿರುಗೇಟು ನೀಡಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !