ಹೊಸದಿಗಂತ ಡಿಜಿಟಲ್ ಡೆಸ್ಕ್:
ತಗ್ಗು ಪ್ರದೇಶ, ರಾಜಕಾಲುವೆ ಹಾಗೂ ಕೆರೆ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗ ಭೀತಿ ಹಿನ್ನೆಲೆಯಲ್ಲಿ ಬಿಬಿಎಂಪಿ ಹಲವು ಮಾರ್ಗಸೂಚಿಗಳನ್ನು ಹೊರಡಿಸಿದೆ.
ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನಗರದ ಹಲವೆಡೆ ಜಲಾವೃತವಾಗಿದೆ. ಆದ್ದರಿಂದ, ಕಾಲರಾ, ಜಾಂಡೀಸ್, ಡೆಂಗ್ಯೂ ಜ್ವರ, ಚಿಕನ್ ಗುನ್ಯಾ, ಮಲೇರಿಯಾ ರೋಗಗಳ ಆತಂಕ ಎದುರಾಗಿದೆ.
ಬಿಬಿಎಂಪಿ ಮತ್ತು ಜಲಮಂಡಳಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಂಗ್ರಹಿಸಲಾದ ನೀರಿನ ಗುಣಮಟ್ಟ ಪರಿಶೀಲನೆಗೆ ಆದೇಶಿಸಿದೆ. ಅರುಣನಗರ, ಮಹಾದೇವಪುರ, ಯಲಹಂಕ, ಬೊಮ್ಮನಹಳ್ಳಿ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಪರೀಕ್ಷೆ ನಡೆಸಿ ವರದಿ ಸಲ್ಲಿಸಲು ಸೂಚಿಸಲಾಗಿದೆ.