Wednesday, August 17, 2022

Latest Posts

ಕೊಡಗಿನಲ್ಲಿ ವ್ಯಾಪಕ ಮಳೆ: ಕಾವೇರಿಯಲ್ಲಿ ಪ್ರವಾಹ ಭೀತಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಕೊಡಗು:

ಜಿಲ್ಲೆಯಲ್ಲಿ ಕಳೆದ ಮೂರು ದಿನದಿಂದ ವ್ಯಾಪಕ ಮಳೆಯಾಗುತ್ತಿದೆ. ಇದರಿಂದ ಕಾವೇರಿ ನದಿ ಪಾತ್ರದಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ. ಹಾರಂಗಿ ಜಲಾಶಯದ ಒಳಹರಿವಿನಲ್ಲೂ ಹೆಚ್ಚಳ ಕಂಡು ಬಂದಿದ್ದು, ಒಂದೇ ದಿನದಲ್ಲಿ ಮೂರು ಅಡಿಗಳಷ್ಟು ನೀರು ಏರಿಕೆಯಾಗಿದೆ.
ಕಾವೇರಿ ನದಿಯಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು ಬಲಮುರಿಯ ಕೆಳ ಸೇತುವೆಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 61.58 ಮಿ.ಮೀ. ಮಳೆಯಾಗಿದೆ. ಮಡಿಕೇರಿ ತಾಲೂಕಿನಲ್ಲಿ 89.5ಮಿ.ಮೀ., ವೀರಾಜಪೇಟೆ ತಾಲೂಕಿನಲ್ಲಿ 45.28 ಮಿ.ಮೀ. ಹಾಗೂ ಸೋಮವಾರಪೇಟೆ ತಾಲೂಕಿನಲ್ಲಿ 49.95 ಮಿ.ಮೀ. ಮಳೆ ಬಿದ್ದಿದೆ.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರದನ್ವಯ ಮಡಿಕೇರಿ ಕಸಬಾ 83.6, ನಾಪೋಕ್ಲು 95, ಸಂಪಾಜೆ 76, ಭಾಗಮಂಡಲ 103.4, ವೀರಾಜಪೇಟೆ ಕಸಬಾ 64.2, ಹುದಿಕೇರಿ 50.5, ಶ್ರೀಮಂಗಲ 56, ಪೊನ್ನಂಪೇಟೆ 40, ಅಮ್ಮತ್ತಿ 32.5, ಬಾಳೆಲೆ 28.5, ಸೋಮವಾರಪೇಟೆ ಕಸಬಾ 46.4, ಶನಿವಾರಸಂತೆ 24.8, ಶಾಂತಳ್ಳಿ 115.5, ಕೊಡ್ಲಿಪೇಟೆ 48.6, ಕುಶಾಲನಗರ 22.4, ಸುಂಟಿಕೊಪ್ಪ 42 ಮಿ.ಮೀ.ಮಳೆಯಾಗಿದೆ.
ಹಾರಂಗಿ ನೀರಿನ ಮಟ್ಟ: ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಬುಧವಾರ ನೀರಿನ ಮಟ್ಟ 2849.55 ಅಡಿಗಳಷ್ಟಿತ್ತು. ಜಲಾಶಯದ ನೀರಿನ ಒಳಹರಿವು 7753 ಕ್ಯುಸೆಕ್ ನಷ್ಟಿದ್ದು, ಜಲಾಶಯದಿಂದ ನದಿಗೆ 365 ಕ್ಯುಸೆಕ್ ಹಾಗೂ ನಾಲೆಗೆ 40 ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ.
ಎಚ್ಚರವಹಿಸಕು ಸೂಚನೆ: ಕಳೆದ ಎರಡು ಮೂರು ದಿನಗಳಿಂದ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ನದಿ, ತೊರೆ, ಹಳ್ಳಕೊಳ್ಳ, ಜಲಪಾತಗಳು ತುಂಬಿ ಹರಿಯುತ್ತಿವೆ. ಬಲಮುರಿ ಕೆಳ ಸೇತುವೆಯಲ್ಲಿ ನೀರು ಹೆಚ್ಚಾಗುತ್ತಿದ್ದು, ಇಲ್ಲಿನ ಸ್ಥಳೀಯರು ಎಚ್ಚರವಹಿಸಬೇಕು ಶಾಸಕ ಅಪ್ಪಚ್ಚುರಂಜನ್ ಸಲಹೆ ಮಾಡಿದ್ದಾರೆ.
ಪ್ರಾಕೃತಿಕ ವಿಕೋಪ ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಅಗತ್ಯ ತಯಾರಿ ಮಾಡಿಕೊಂಡಿದೆ. ಆ ದಿಸೆಯಲ್ಲಿ ಹೋಬಳಿ ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಮಳೆ ಹೆಚ್ಚಾದ ಸಂದರ್ಭದಲ್ಲಿ ಸಾರ್ವಜನಿಕರು ಮುನ್ನೆಚ್ಚರ ವಹಿಸಬೇಕು. ಜೊತೆಗೆ ಕಾಳಜಿ ಕೇಂದ್ರಕ್ಕೆ ಸ್ಥಳಾಂತರವಾಗಬೇಕು ಎಂದು ಕೋರಿದರು.
ಕಾಳಜಿ ಕೇಂದ್ರಕ್ಕೆ ತೆರಳುವ ಸಂದರ್ಭದಲ್ಲಿ ಕೋವಿಡ್ ಪರೀಕ್ಷೆ ಮಾಡಲಾಗುತ್ತದೆ. ಯಾವುದೇ ರೀತಿ ಸಮಸ್ಯೆ ಉಂಟಾಗದಂತೆ ಗಮನಹರಿಸಬೇಕು ಎಂದು ಅಪ್ಪಚ್ಚುರಂಜನ್ ಅಧಿಕಾರಿಗಳು ಸಲಹೆ ಮಾಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!