ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಪರಿಸ್ಥಿತಿ ನಡುವೆ ಶ್ರೀನಗರದಲ್ಲಿ ಸಿಲುಕಿಕೊಂಡಿದ್ದ ರಾಜ್ಯದ 13 ವಿದ್ಯಾರ್ಥಿಗಳನ್ನು ಭದ್ರತಾ ದೃಷ್ಟಿಯಿಂದಾಗಿ ದೆಹಲಿಗೆ ಸ್ಥಳಾಂತರಿಸಲಾಗಿದೆ.
ಪಾಕಿಸ್ತಾನದ ದಾಳಿ ನಡುವೆ ಉದ್ನಿಗ್ನ ಪರಿಸ್ಥಿತಿಯಲ್ಲಿ ಸಿಲುಕಿಕೊಂಡಿದ್ದ ವಿದ್ಯಾರ್ಥಿಗಳನ್ನು ಕೇಂದ್ರ ಸಚಿವ ಕುಮಾರಸ್ವಾಮಿ ಅವರ ನಿರ್ದೇಶನದ ಮೇರೆಗೆ ಕಾರ್ಯಪ್ರವೃತ್ತರಾದ ಅಧಿಕಾರಿಗಳು, ಜಮ್ಮುವಿನಿಂದ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆ ತರುವಲ್ಲಿ ಯಶಸ್ವಿ ಆಗಿದ್ದಾರೆ.
ವಿದ್ಯಾರ್ಥಿಗಳು ಶ್ರೀನಗರದಿಂದ ಜಮ್ಮುವಿಗೆ ಬಸ್‌ನಲ್ಲಿ ಮತ್ತು ನಂತರ ರೈಲಿನ ಮೂಲಕ ದೆಹಲಿಗೆ ಪ್ರಯಾಣ ಬೆಳೆಸಿದ್ದು, ರೈಲ್ವೇ ನಿಲ್ದಾಣಕ್ಕೆ ಬಂದ ನಂತರ ಸಚಿವಾಲಯದ ಅಧಿಕಾರಿಗಳು ವಿದ್ಯಾರ್ಥಿಗಳನ್ನು ಬರಮಾಡಿಕೊಂಡು ಅವರಿಗೆ ಬೆಂಗಾವಲು ನೀಡಿದ್ದಾರೆ.
ಶ್ರೀನಗರದ ಶೇರ್-ಎ-ಕಾಶ್ಮೀರ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ವ್ಯಾಸಾಂಗ ಮಾಡುತ್ತಿದ್ದೆವು. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾದಾಗ ನಾವೆಲ್ಲರೂ ಆತಂಕಕ್ಕೊಳಗಾಗಿದ್ದೆವು. ಆದರೆ, ಕೇಂದ್ರದ ತ್ವರಿತ ಪ್ರತಿಕ್ರಿಯೆ ಎಲ್ಲವನ್ನೂ ಬದಲಾಯಿಸಿತು. ವ್ಯವಸ್ಥೆಗಳ ಬಗ್ಗೆ ನಮಗೆ ಮಾಹಿತಿ ನೀಡಲಾಯಿತು ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.