ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಹೆಚ್ಚಾಗಿದ್ದು, ಈ ಹಿನ್ನೆಲೆ ಅಗತ್ಯ ಮುನ್ನಚ್ಚರಿಕೆ ಕ್ರಮವಾಗಿ ತುರ್ತು ಅಧಿಕಾರ ಬಳಸುವಂತೆ ಎಲ್ಲಾ ರಾಜ್ಯಗಳಿಗೆ, ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಗೃಹ ಸಚಿವಾಲಯ ಆದೇಶ ಮಾಡಿದೆ.
ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ನಾಗರಿಕ ರಕ್ಷಣಾ ನಿಯಮಗಳ ಅಡಿಯಲ್ಲಿ ತುರ್ತು ಅಧಿಕಾರಗಳನ್ನು ಬಳಸುವಂತೆ ಗೃಹ ಸಚಿವಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳು ಮತ್ತು ಆಡಳಿತಗಾರರಿಗೆ ಪತ್ರ ಬರೆದಿದೆ.