ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಲೆನಾಡಿಗರಿಗೆ ಮಂಗನ ಕಾಯಿಲೆ ಭೀತಿ ಎದುರಾಗಿದ್ದು, ತೀರ್ಥಹಳ್ಳಿಯಲ್ಲಿ ಒಂದೇ ದಿನ ಆರು ಮಂದಿಗೆ ಸೋಂಕು ದೃಢಪಟ್ಟಿದೆ.
ಇದೀ ತೀರ್ಥಹಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಆರು ಜನರನ್ನು ದಾಖಲು ಮಾಡಲಾಗಿದ್ದು, ಇವರ ಸಂಪರ್ಕಕ್ಕೆ ಬಂದಿರುವ ಒಟ್ಟಾರೆ 42 ಜನರ ರಕ್ತ ತಪಾಸಣೆ ಮಾಡಲಾಗಿದೆ.
ಶಿವಮೊಗ್ಗದಲ್ಲಿಯೂ ಈವರೆಗೂ 32 ಮಂಗನ ಕಾಯಿಲೆ ಪ್ರಕರಣಗಳು ದಾಖಲಾಗಿವೆ. ವಾರದ ಹಿಂದಷ್ಟೇ ಹೊಸನಗರದಲ್ಲಿ 18 ವರ್ಷದ ಯುವತಿ ಮಂಗನ ಕಾಯಿಲೆಗೆ ಮೃತಪಟ್ಟಿದ್ದರು.