May 18, 2026
Monday, May 18, 2026
spot_img

ಆಸ್ಕರ್ ಗೂ ತಟ್ಟಿತು ವಾರ್ ಭೀತಿ: ಡ್ರೋನ್ ದಾಳಿ ಆಗ್ಬಹುದು ಹುಷಾರ್ ಎಂದ ಎಫ್‌ಬಿಐ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಶ್ವದ ಅತ್ಯಂತ ಪ್ರತಿಷ್ಠಿತ ಸಿನಿಮಾ ಪ್ರಶಸ್ತಿ ಸಮಾರಂಭವಾದ ಆಸ್ಕರ್ ಅವಾರ್ಡ್‌ಗೆ ಸಿದ್ಧತೆಗಳು ಜೋರಾಗಿ ನಡೆಯುತ್ತಿರುವ ನಡುವೆಯೇ ಭದ್ರತಾ ಆತಂಕವೂ ಹೆಚ್ಚಾಗಿದೆ. ಅಮೆರಿಕ–ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆ ಸಮಾರಂಭ ನಡೆಯುವ ಸ್ಥಳದಲ್ಲಿ ಭದ್ರತೆಯನ್ನು ಕಟ್ಟುನಿಟ್ಟಾಗಿಸಲು ಅಧಿಕಾರಿಗಳು ಸೂಚಿಸಿದ್ದಾರೆ.

ಅಮೆರಿಕದ ಲಾಸ್ ಎಂಜಲೀಸ್‌ನ ಹಾಲಿವುಡ್ ಸ್ಟುಡಿಯೋದಲ್ಲಿರುವ ಡಾಲ್ಬಿ ಥಿಯೇಟರ್‌ನಲ್ಲಿ ಈ ವರ್ಷದ ಆಸ್ಕರ್ ಕಾರ್ಯಕ್ರಮ ನಡೆಯಲಿದೆ. ಸಿನಿಮಾ ಕ್ಷೇತ್ರದ ಅನೇಕ ಖ್ಯಾತ ನಟರು ಮತ್ತು ತಂತ್ರಜ್ಞರು ಭಾಗವಹಿಸುವ ಈ ಕಾರ್ಯಕ್ರಮಕ್ಕೆ ಸಾವಿರಾರು ಜನರು ಸೇರುವ ನಿರೀಕ್ಷೆ ಇದೆ. ಈ ಹಿನ್ನೆಲೆ ಎಫ್‌ಬಿಐ ಅಧಿಕಾರಿಗಳು ಸ್ಥಳೀಯ ಪೊಲೀಸರಿಗೆ ಹೆಚ್ಚಿನ ಭದ್ರತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಇದನ್ನೂ ಓದಿ:

ಇತ್ತೀಚಿನ ದಿನಗಳಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವುದರಿಂದ ಅಮೆರಿಕದ ಪಶ್ಚಿಮ ಕರಾವಳಿಯ ಮೇಲೆ ಡ್ರೋನ್ ದಾಳಿ ಸಂಭವಿಸುವ ಸಾಧ್ಯತೆ ಇದೆ ಎಂದು ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿವೆ. ಈ ಕಾರಣದಿಂದ ಆಸ್ಕರ್ ಸಮಾರಂಭದ ಸ್ಥಳದ ಸುತ್ತಮುತ್ತ ಹೆಚ್ಚುವರಿ ಭದ್ರತಾ ವ್ಯವಸ್ಥೆ ಮಾಡಲಾಗುತ್ತಿದೆ.

98ನೇ ಸಾಲಿನ ಆಸ್ಕರ್ ಪ್ರಶಸ್ತಿ ಸಮಾರಂಭ 2026ರ ಮಾರ್ಚ್ 15ರಂದು ಲಾಸ್ ಎಂಜಲೀಸ್‌ನಲ್ಲಿ ನಡೆಯಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !