ಮೈತ್ರಿಕೂಟ ‘ಇಂಡಿಯಾ’ಗೆ ಹೆದರಿ ಹೆಸರು ಬದಲಿಸಲು ಹೊರಟಿದ್ದಾರೆ: ಡಿಸಿಎಂ ಡಿಕೆ ಶಿವಕುಮಾರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಮೈತ್ರಿಕೂಟ ‘ಇಂಡಿಯಾ’ಗೆ (INDIA) ಹೆದರಿ ಕೇಂದ್ರ ಸರ್ಕಾರ ರಿಪಬ್ಲಿಕ್ ಆಫ್ ಭಾರತ (Republic of Bharat) ಮಾಡಲು ಹೊರಟಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.

ಕನಕಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಕೇಂದ್ರ ಸರ್ಕಾರ ಮುಂದಿನ ಚುನಾವಣೆಯಲ್ಲಿ ಸೋಲನ್ನು ನೋಡುತ್ತಿರುವುದನ್ನು ಈ ಸಮಯದಲ್ಲಿ ಗಮನಿಸಬಹುದು. ನಮ್ಮ ದೇಶದ ನೋಟಿನ ಮೇಲೆ ಇಂಡಿಯಾ ಅಂತ ಇದೆ. ಇದನ್ನು ಬದಲಿಸಲು ಹೊರಟಿದ್ದಾರೆ. ನಾವೆಲ್ಲರೂ ಭಾರತೀಯರೇ ಆದರೆ ಸೋಲಿಗೆ ಹೆದರಿ ಈ ರೀತಿ ಮಾಡುತ್ತಿರುವುದು ಸರಿಯಲ್ಲ ಎಂದರು.

ಅವರ ಆಲೋಚನೆಗಳು ಇನ್ನೂ ಬಹಳ ಇದಾವೆ. ಅವುಗಳನ್ನು ಬೇರೆ ಸಮಯದಲ್ಲಿ ಮಾತನಾಡುತ್ತೇನೆ. ಕಾಂಗ್ರೆಸ್ ಪಕ್ಷದ ರಾಜ್ಯ ಘಟಕದ ಅಧ್ಯಕ್ಷನಾಗಿ ಈ ಪ್ರಸ್ತಾವನೆಯನ್ನು ವಿರೋಧಿಸುತ್ತೇನೆ. ಇಂತಹ ರಾಜಕಾರಣ ಹೆಚ್ಚು ದಿನ ನಡೆಯುವುದಿಲ್ಲ. ನೀವು ಹೆಚ್ಚು ದಿನ ಅಧಿಕಾರದಲ್ಲಿ ಇರಲು ಸಾಧ್ಯವಿಲ್ಲ. ಇದನ್ನು ಮಾಡಬೇಡಿ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!