ಭಾರತ-ಪಾಕ್‌ ಯುದ್ಧಭೀತಿ: ಬಂದ್‌ ಆಗಿದ್ದ 32 ಏರ್‌ಪೋರ್ಟ್‌ಗಳು ಮತ್ತೆ ಕಾರ್ಯಾರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯಿಂದ ಮುಚ್ಚಲ್ಪಟ್ಟಿದ್ದ ವಿವಿಧ ರಾಜ್ಯಗಳ 32 ವಿಮಾನ ನಿಲ್ದಾಣಗಳು ಮತ್ತೆ ಕಾರ್ಯಾರಂಭ ಮಾಡಲು ವಾಯುಪಡೆ ಸೂಚನೆ ನೀಡಿರುವುದಾಗಿ ವರದಿಗಳು ತಿಳಿಸಿವೆ.

32 ವಿಮಾನ ನಿಲ್ದಾಣಗಳನ್ನು ತೆರೆಯುವಂತೆ ಭಾರತೀಯ ವಾಯುಪಡೆ ಅಧಿಕಾರಿಗಳು ಸೂಚನೆ ನೀಡಿದ ಬಳಿಕ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಸಂಬಂಧಪಟ್ಟ ವಿಮಾನ ನಿಲ್ದಾಣಗಳಿಗೆ ಸೂಚನೆ ನೀಡಿದೆ. ಹೀಗಾಗಿ ದೇಶದ ಪಶ್ಚಿಮ ಮತ್ತು ಉತ್ತರ ಭಾಗಗಳಲ್ಲಿ ತಾತ್ಕಾಲಿಕವಾಗಿ ಮುಚ್ಚಲಾಗಿದ್ದ ಏರ್‌ಪೋರ್ಟ್‌ಗಳು ಮತ್ತೆ ಕಾರ್ಯಾರಂಭ ಮಾಡಲಿವೆ.

ಇತ್ತೀಚೆಗೆ ಭಾರತ ಪಾಕ್‌ ನಡುವಿನ ಸಂಘರ್ಷ ತೀವ್ರಗೊಂಡಿತ್ತು. ಈ ಹಿನ್ನೆಲೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು 32 ವಿಮಾನ ನಿಲ್ದಾಣಗಳನ್ನು ಮೇ 15ರ ವರೆಗೆ ತಾತ್ಕಾಲಿಕವಾಗಿ ಬಂದ್‌ ಮಾಡುವಂತೆ ಸೂಚಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!