ಹೊಸದಿಗಂತ ಡಿಜಿಟಲ್ ಡೆಸ್ಕ್:
ರಿಯಲ್ ಎಸ್ಟೇಟ್ ಮಾಫಿಯಾದಿಂದ ಮನನೊಂದ ಉದ್ಯಮಿಯೊಬ್ಬರು ತಮ್ಮ ಪತ್ನಿ ಸಮೇತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಿರಿಯಾಪಟ್ಟಣದ ಬೈಲಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕೊಡಗಿನ ಕುಶಾಲನಗರದಲ್ಲಿ ಉದ್ಯಮ ಹೊಂದಿದ್ದ ಕೊಪ್ಪ ನಿವಾಸಿ ಸುರೇಶ್ (40) ಮತ್ತು ಅವರ ಪತ್ನಿ ಪಲ್ಲವಿ (28) ಆತ್ಮಹತ್ಯೆ ಮಾಡಿಕೊಂಡವರು.
ಬುಧವಾರ ಸುರೇಶ್ ತನ್ನ ಪತ್ನಿಯನ್ನು ದೇವಸ್ಥಾನಕ್ಕೆ ಕರೆದುಕೊಂಡು ಹೋಗಿದ್ದರು. ಆದರೆ ಕಾವಲ್ ನ ಜಮೀನಿನ ಹಳೇಯ ಖಾಲಿ ಮನೆಯಲ್ಲಿ ಪತಿ-ಪತ್ನಿ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ರಿಯಲ್ ಎಸ್ಟೇಟ್ ಮಾಫಿಯಾದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೂ ಮುನ್ನ ಸುರೇಶ್ ಬರೆದಿಟ್ಟಿದ್ದ ಡೆತ್ ನೋಟ್ ಪತ್ತೆಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 12 ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.