January18, 2026
Sunday, January 18, 2026
spot_img

ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಕ್ಕೆ ಆಹಾರ ಹಾಕಿದ್ರೆ ಜೈಲಿನ ಕಂಬಿ ಎಣಿಸ್ಬೇಕಾಗತ್ತೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪಾರಿವಾಳಗಳಿಂದ ಕಾಯಿಲೆಗಳು ಹರಡುತ್ತಿರುವುದು ಹೆಚ್ಚಾಗುತ್ತಿದ್ದು, ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಸಾರ್ವಜನಿಕ ಸ್ಥಳಗಳಲ್ಲಿ ಅವುಗಳಿಗೆ ಆಹಾರ ನೀಡುವುದನ್ನು ನಿಷೇಧಿಸಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದರಿಂದ ಅವುಗಳ ದಟ್ಟಣೆ ಹೆಚ್ಚಾಗಿದೆ. ಪರಿಣಾಮ ಅವುಗಳ ಮಲ-ಮೂತ್ರದಿಂದ ಸೋಂಕು ಹರಡುವುದು, ಉಸಿರಾಟ ತೊಂದರೆ ಸೇರಿದಂತೆ ಶ್ವಾಸಕೋಶ ಸಂಬಂಧಿತ ಗಂಭೀರ ಆರೋಗ್ಯ ಸಮಸ್ಯೆಗಳಾಗುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸ ನಿಯಂತ್ರಣ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಹೊಸ ನಿಯಮದಂತೆ ನಿಯಮ ಉಲ್ಲಂಘಿಸಿ ಪಾರಿವಾಳಗಳಿಗೆ ಆಹಾರ ನೀಡಿದವರಿಗೆ, ಸಾಂಕ್ರಾಮಿಕ ರೋಗ ಹರಡಿದ ನಿರ್ಲಕ್ಷ್ಯದ ಪ್ರಕರಣ ದಾಖಲಿಸಲಾಗುತ್ತದೆ. ಅವರಿಗೆ ದಂಡ ಹಾಗೂ ಆರು ತಿಂಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ.

ಯಾವುದೇ ವ್ಯಕ್ತಿಯು ಸಾರ್ವಜನಿಕರಿಗೆ ತೊಂದರೆ ಅಥವಾ ಆರೋಗ್ಯಕ್ಕೆ ಅಪಾಯವನ್ನು ಉಂಟುಮಾಡುವ ಪ್ರದೇಶಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡಬಾರದು ಅಥವಾ ಆಹಾರವನ್ನು ನೀಡಲು ಪ್ರೇರೇಪಿಸಬಾರದು. ಪಾರಿವಾಳಗಳಿಗೆ ಆಹಾರವನ್ನು ನೀಡುವುದನ್ನು ಗೊತ್ತುಪಡಿಸಿದ ಪ್ರದೇಶಗಳಲ್ಲಿ ಮಾತ್ರ ಷರತ್ತುಗಳೊಂದಿಗೆ ಅನುಮತಿಸಲಾಗುತ್ತದೆ. ನಿಗದಿಪಡಿಸಿದ ಪ್ರದೇಶಗಳ ನಿರ್ವಹಣೆ ಮತ್ತು ನಿರ್ದೇಶನಗಳ ಅನುಸರಣೆಯ ಜವಾಬ್ದಾರಿಯನ್ನು ಕೆಲವು ಎನ್‌ಜಿಓ ವಹಿಸಿಕೊಳ್ಳಬೇಕು ಎಂದು ತಿಳಿಸಲಾಗಿದೆ.

Must Read

error: Content is protected !!