ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ಮಹತ್ವಾಕಾಂಕ್ಷೆಯ ‘ಚಂದ್ರಯಾನ–3’ರ ಉಡ್ಡಯನ ಯಶಸ್ಸಿನ ಹಿನ್ನೆಲೆಯಲ್ಲಿ ಇಸ್ರೋ ಅಧ್ಯಕ್ಷ ಎಸ್. ಸೋಮನಾಥ್ ಅವರನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಆರ್‌ಎಸ್‌ಎಸ್ ಕಡೆಯಿಂದ ಬುಧವಾರ ಅಭಿನಂದಿಸಲಾಯಿತು.
ಬೆಂಗಳೂರಿನ ಕೆಂಪೇಗೌಡ ನಗರದಲ್ಲಿರುವ ರಾಷ್ಟ್ರೋತ್ಥಾನ ಪರಿಷತ್‌ನ ಪ್ರಧಾನ ಕಚೇರಿಯಲ್ಲಿ ಆರೆಸ್ಸೆಸ್ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ, ಸೋಮನಾಥ್ ಅವರನ್ನು ಅಭಿನಂದಿಸಿದರು.
ಇದೇ ಸಂದರ್ಭ ರಾಷ್ಟ್ರೋತ್ಥಾನ ಪರಿಷತ್‌ನ ಅಧ್ಯಕ್ಷ ಎಂ.ಪಿ. ಕುಮಾರ್, ಪ್ರಧಾನ ಕಾರ್ಯದರ್ಶಿ ನಾ. ದಿನೇಶ್ ಹೆಗ್ಡೆ, ರಾಷ್ಟ್ರೋತ್ಥಾನ ಪರಿಷತ್‌ನ ಪರವಾಗಿ ಇಸ್ರೋ ಅಧ್ಯಕ್ಷರನ್ನು ಸನ್ಮಾನಿಸಿದರು.