ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ರಾಜಸ್ಥಾನದ ಜಲೋರ್ ಜಿಲ್ಲೆಯ ಹಳ್ಳಿಯೊಂದರಲ್ಲಿ 95 ಅಡಿ ಆಳದ ಕೊಳವೆ ಬಾವಿಗೆ ನಾಲ್ಕು ವರ್ಷದ ಬಾಲಕ ಬಿದ್ದಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಬಾಲಕ ಅನಿಲ್ ದೇವಾಸಿ ತಂದೆಯ ಜಮೀನಿನಲ್ಲಿ ಆಟವಾಡುತ್ತಾ ಬಾವಿಗೆ ಬಿದ್ದಿದ್ದಾನೆ.
ರಕ್ಷಣಾ ಕಾರ್ಯಾಚರಣೆ ಜಾರಿಯಲ್ಲಿದ್ದು, ಕೊಳವೆ ಬಾವಿಗೆ ಕ್ಯಾಮರಾ ಇಳಿಸಿ ನೋಡಲಾಗಿದೆ. ಮಗು ಜೀವಂತವಾಗಿದ್ದು, ಆಮ್ಲಜನಕ ಒದಗಿಸುವ ವ್ಯವಸ್ಥೆ ಮಾಡಲಾಗಿದೆ. ಆಹಾರ ಕೂಡ ನೀಡಿದ್ದು, ಬಾಲಕನೊಂದಿಗೆ ನಿರಂತರ ಸಂಪರ್ಕ ಸಾಧಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.