Thursday, December 18, 2025

ಸಿಎಂ ಸಿದ್ದರಾಮಯ್ಯ ಸ್ವಕ್ಷೇತ್ರ ವರುಣಾದಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಮಹಿಳಾ ಸಿಬ್ಬಂದಿ

ಹೊಸದಿಗಂತ ಡಿಜಿಟಲ್ ಡೆಸ್ಕ್;

ಮೈಸೂರು ತಾಲೂಕಿನ ವರುಣಾ ಗ್ರಾಮ ಪಂಚಾಯಿತಿಯಲ್ಲಿ ನಿದ್ರೆ ಮಾತ್ರೆ ಸೇವಿಸಿ ಮಹಿಳಾ ಸಿಬ್ಬಂದಿ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ.

ವರುಣಾ ಪಂಚಾಯಿತಿ ಕಾರ್ಯದರ್ಶಿಯಾಗಿರುವ ದಿವ್ಯಾ ಆತ್ಮಹತ್ಯೆಗೆ ಯತ್ನಿಸಿದ ಸಿಬ್ಬಂದಿ. ಅಸ್ವಸ್ಥಗೊಂಡಿದ್ದ ದಿವ್ಯಾ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ವರುಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ಕ್ಷೇತ್ರದ ವರುಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ದಿವ್ಯಾ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವರ್ಗಾವಣೆ ವಿಚಾರಕ್ಕೆ ಮಾನಸಿಕ ಕಿರುಕುಳ ಆರೋಪ ಕೇಳಿಬಂದಿದೆ.

error: Content is protected !!