ಲೈಂಗಿಕ ಕಿರುಕುಳ ನೀಡುತ್ತಿದ್ದ ವಸತಿನಿಲಯ ಉಸ್ತುವಾರಿಗೆ ಹಿಗ್ಗಾ-ಮುಗ್ಗಾ ಥಳಿಸಿದ ವಿದ್ಯಾರ್ಥಿನಿಯರು

ಹೊಸದಿಗಂತ ವರದಿ, ಮಂಡ್ಯ:

ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ವಸತಿನಿಲಯ ಉಸ್ತುವಾರಿಗೆ ಹಿಗ್ಗಾ-ಮುಗ್ಗಾ ಥಳಿಸಿ ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ಶ್ರೀರಂಗಪಟ್ಟಣ ತಾಲೂಕು ಕಟ್ಟೇರಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರಾಷ್ಟ್ರೀಯ ಅಭಿಯಾನ ಶಿಕ್ಷಣ ಯೋಜನೆ ವತಿಯಿಂದ ನಡೆಯುತ್ತಿರುವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಮುಖ್ಯಶಿಕ್ಷಕ ಹಾಗೂ ಉಸ್ತುವಾರಿಯಾಗಿರುವ ಚಿನ್ಮಯಾನಂದಸ್ವಾಮಿ ಎಂಬಾತನೇ ವಿದ್ಯಾರ್ಥಿನಿಯರಿಂದ ಧರ್ಮದೇಟು ತಿಂದವನಾಗಿದ್ದಾನೆ.
ಘಟನೆ ವಿವರ :
ವಸತಿ ನಿಲಯದಲ್ಲಿ ಉಸ್ತುವಾರಿಯಾಗಿದ್ದ ಚಿನ್ಮಯಾನಂದಸ್ವಾಮಿ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡುವುದು, ಅಸಭ್ಯವಾಗಿ ವರ್ತಿಸುವುದನ್ನು ರೂಢಿಸಿಕೊಂಡಿದ್ದ. ಈ ಬಗ್ಗೆ ವಾರ್ಡನ್‌ಗೆ ತಿಳಇಸಿದ್ದರೂ ಸಹ ಅವರನ್ನೂ ಬೆದರಿಸಿ ಯಾವುದೇ ವಿಚಾರವೂ ಹೊರಗೆ ಹೋಗದಂತೆ ನೋಡಿಕೊಳ್ಳುತ್ತಿದ್ದ.


ವಿದ್ಯಾರ್ಥಿನಿಯೊಬ್ಬಳನ್ನು ರೂಮಿಗೆ ಕರೆದು ಅವರ ಜೊತೆ ಅಸಭ್ಯವಾಗಿ ವರ್ತಿಸಿ ಮುತ್ತು ಕೊಡಲು ಹೋದಾಗ ಪ್ರತಿರೋಧ ವ್ಯಕ್ತಪಡಿಸಿ ತನ್ನ ಸ್ನೇಹಿತರನ್ನು ಕರೆದು ಹೇಳಿಕೊಂಡಿದ್ದಾಳೆ. ಇದರಿಂದ ಉದ್ರಿಕ್ತಗೊಂಡ ಎಲ್ಲ ಮಕ್ಕಳೂ ಒಟ್ಟಿಗೇ ಸೇರಿ ಚಿನ್ಮಯಾನಂದಸ್ವಾಮಿಗೆ ತರಾಟೆ ತೆಗೆದುಕೊಂಡರು. ಬಳಿಕ ಆತನೂ ಎಚ್ಚರಿಕೆ ನೀಡಿದ್ದರಿಂದ ಮತ್ತಷ್ಟು ಕುಪಿತಗೊಂಡ ವಿದ್ಯಾರ್ಥಿನಿಯರು ಕೈ ಸಿಕ್ಕ ಕೋಲು, ದೊಣ್ಣೆಗಳನ್ನು ಹಿಡಿದು ಹಿಗ್ಗಾ ಮುಗ್ಗ ಥಳಿಸಿದರು.
ಈ ದೃಶ್ಯವನ್ನು ವೀಡಿಯೋ ಮಾಡುತ್ತಿದ್ದನ್ನು ಕಂಡ ಚಿನ್ಮಯಾನಂದಸ್ವಾಮಿ ವೀಡಿಯೋ ತೆಗೆಯದಂತೆ ಎಚ್ಚರಿಕೆ ನೀಡಿದ್ದಾನೆ. ಆದರೂ ಆಕೆ ವೀಡಿಯೋ ಮಾಡುತ್ತಿದ್ದನ್ನು ಕಂಡು ವಿದ್ಯಾರ್ಥಿನಿಯರಿಂದ ತಪ್ಪಿಸಿಕೊಂಡು ಬಂದು ಬಂದು ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ.
ಸುದ್ಧಿ ತಿಳಿದ ತಕ್ಷಣ ಗ್ರಾಮಸ್ಥರು, ಪೋಷಕರು ಸ್ಥಳಕ್ಕೆ ಆಗಮಿಸಿ ಚಿನ್ಮಯಾನಂದಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಕೆ.ಆರ್. ಸಾಗರ ಇನ್ಸ್‌ಪೆಕ್ಟರ್ ಪುನೀತ್ ಮತ್ತು ಪಿಎಸ್‌ಐ ಲಿಂಗರಾಜು ವಿದ್ಯಾರ್ಥಿಗಳಿಂದ ಮಾಹಿತಿ ಪಡೆದು ವಶಕ್ಕೆ ಪಡೆದರು. ವಾರ್ಡನ್ ನಮಿತ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ವಶಕ್ಕೆ ಪೆಡದ ಪೊಲೀಸರು ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದುಘಿ, ನ್ಯಾಯಾಧೀಶರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಹಲವು ತಿಂಗಳುಗಳಿಂದಲೂ ಆರೋಪಿ ಚಿನ್ಮಯಾನಂದಸ್ವಾಮಿ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದನೆನ್ನಲಾಗಿದೆ. ಪೋಷಕರು ಮತ್ತು ಯಾರಿಗಾದರೂ ಹೇಳಿದರೆ ಪರೀಕ್ಷೆ ಬರೆಯಲು ಆವಕಾಶ ನೀಡುವುದಿಲ್ಲ ಎಂದು ವಿದ್ಯಾರ್ಥಿಗಳನ್ನು ಬೆದರಿಸುತ್ತಿದ್ದನೆನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!