ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದಲ್ಲಿನ ಸರ್ಕಾರಿ ಸ್ವಾಮ್ಯದ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ತರಬೇತಿಯ ಮಹಿಳಾ ಟ್ರೈನಿ ಡಾಕ್ಟರ್ ಹತ್ಯೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
ಆಕೆಯ ಸಾವಿಗೆ ನ್ಯಾಯ ಸಿಗಬೇಕು ಎಂದು ಒತ್ತಾಯಿಸಿ ನರ್ಸಿಂಗ್ ವಿದ್ಯಾರ್ಥಿಗಳು ಇಂದು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮಧ್ಯೆ ಪಶ್ಚಿಮ ಬಂಗಾಳದಾದ್ಯಂತ ರಸ್ತೆ ತಡೆ ನಡೆಸುವುದಾಗಿ ಎಸ್‌ಎಫ್‌ಐ ಮತ್ತು ಡಿವೈಎಫ್‌ಐ ಶನಿವಾರ ತಿಳಿಸಿವೆ.
ಉತ್ತರ ಕೋಲ್ಕತ್ತಾದ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಟ್ರೈನಿ ಡಾಕ್ಟರ್ ಮೃತದೇಹ ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೈಮೇಲೆ ಗಾಯದ ಗುರುತುಗಳಿದ್ದವು. ನೈಟ್ ಡ್ಯೂಟಿ ವೇಳೆ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದು, ಕೊಲೆ ಮಾಡಲಾಗಿದೆ. ಮರಣೋತ್ತರ ಪರೀಕ್ಷೆಯಲ್ಲಿ ಲೈಂಗಿಕ ದೌರ್ಜನ್ಯ ದೃಢಪಟ್ಟಿದೆ. ಸಾವಿಗೆ ನ್ಯಾಯ ಬೇಕು, ಅಪರಾಧಿಗಳನ್ನು ಹಿಡಿಯಬೇಕು ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.