ಹೊಸ ದಿಗಂತ ಡಿಜಿಟಲ್ ಡೆಸ್ಕ್:
2023 ರ ಫೆಮಿನಾ ಮಿಸ್ ಇಂಡಿಯಾ ಆಗಿ ರಾಜಸ್ತಾನದ 19 ವರ್ಷದ ನಂದಿನಿ ಗುಪ್ತಾ ಹೊರಹೊಮ್ಮಿದ್ದಾರೆ. ಮಣಿಪುರದ ಇಂಫಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ನಂದಿನಿ ಗುಪ್ತಾ ಅವರು ಮಿಸ್ ಇಂಡಿಯಾ ಕಿರೀಟವನ್ನು ಮುಡಿಗೇರಿಸಿಕೊಂಡರು. ದೆಹಲಿಯ ಶ್ರೇಯಾ ಪೂಂಜಾ ಮೊದಲ ರನ್ನರ್ ಅಪ್ ಆಗಿ ಆಯ್ಕೆಯಾದರೆ, ಮಣಿಪುರದ ತೌನೊಜಮ್ ಸ್ಟ್ರೆಲಾ ಲುವಾಂಗ್ ಎರಡನೇ ರನ್ನರ್ ಅಪ್ ಆದರು.