ಹೊಸದಿಗಂತ ವರದಿ, ಮಂಗಳೂರು:
ಫೆಂಗಲ್ ಚಂಡಮಾರುತದ ಅಬ್ಬರಕ್ಕೆ ಉಡುಪಿ ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿದ್ದು, ಜಿಲ್ಲಾಡಳಿತವೂ ಎಲ್ಲ ಅಂಗನವಾಡಿ, ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುವರೆಗಿನ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಡಿ.3 ರಂದು (ಮಂಗಳವಾರ) ರಜೆ ಘೋಷಿಸಿದೆ.
ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ರಜೆ ಘೋಷಿಸಿ ಆದೇಶ ನೀಡಿದ್ದಾರೆ. ಈಗಾಗಲೇ ಮಳೆಯಾಗುತ್ತಿದ್ದು ಮಂಗಳವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಸಾರ್ವಜನಿಕರು ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ.