ಹೊಸದಿಗಂತ ಡಿಜಿಟಲ್ ಡೆಸ್ಕ್:
ಫೆಂಗಲ್ ಚಂಡಮಾರುತದ ಪರಿಣಾಮ ನಗರದ ಮಾರುಕಟ್ಟೆಗಳಿಗೆ ತರಕಾರಿ ಪೂರೈಕೆ ಕಡಿಮೆಯಾಗಿದೆ. ಪರಿಣಾಮ, ಈರುಳ್ಳಿ ದರ ಶತಕ ಸಮೀಪಿಸಿದ್ದರೆ, ಟೊಮೆಟೋ ಸೇರಿ ಬಹುತೇಕ ಎಲ್ಲ ತರಕಾರಿಗಳ ಬೆಲೆಯೂ ಗಗನಕ್ಕೇರಿದ್ದು, ಗ್ರಾಹಕರು ಕಂಗಾಲಾಗಿದ್ದಾರೆ.
ಗುರುವಾರ ಉತ್ತಮ ಗುಣಮಟ್ಟದ ಪ್ರಥಮ ದರ್ಜೆ ಈರುಳ್ಳಿ ದರ 80 – ₹90 ತಲುಪಿದ್ದರೆ, ಟೊಮೆಟೋ 260 ವರೆಗೂ ಮಾರಾಟವಾಗಿದೆ. ಹಾಪ್ ಕಾಮ್ಸ್‌ನಲ್ಲಿ ಈರುಳ್ಳಿ ಕೇಜಿ 100ಕ್ಕೆ ಮಾರಾಟವಾಗಿದ್ದರೆ, ಬೆಳ್ಳುಳ್ಳಿ ಕೇಜಿಗೆ 547 ಆಗಿ ದಾಖಲೆ ಬರೆದಿದೆ. ಸಾಮಾನ್ಯ ಮಾರುಕಟ್ಟೆಯಲ್ಲೂ ಬೆಳ್ಳುಳ್ಳಿ ಗರಿಷ್ಠ 400 ರಿಂದ 500 ಬೆಲೆಯಿತ್ತು. ನಿತ್ಯ ಅಗತ್ಯವಾದ ಕೊತ್ತಂಬರಿ ಮತ್ತು ಕುಬೇವಿನ ಸೊಪ್ಪು ಕ್ರಮವಾಗಿ ಕೇಜಿಗೆ 798 – ₹155 ಮತ್ತು 135 ರಷ್ಟಿತ್ತು.
ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರದ ರೈತರಿಂದ ಬೆಂಗಳೂರಿಗೆ ತರಕಾರಿ ಕಡಿಮೆ ಪೂರೈಕೆಯಾಗುತ್ತಿದೆ. ಆದರೆ ಬರುತ್ತಿರುವ ತರಕಾರಿ ಕಳಪೆಯಾಗಿದೆ. ಹೀಗಾಗಿ ದರ ಹೆಚ್ಚಳವಾಗುತ್ತಿದೆ. ಮಳೆಯಿಂದಾಗಿ ಬೆಳೆಗೆ ಹಾನಿ ಆಗಿರುವುದರಿಂದ ಕಲಾಸಿಪಾಳ್ಯಕ್ಕೆ ಟೊಮೆಟೋ ತೀರಾ ಕಡಿಮೆ ಬರುತ್ತಿದೆ. ಸಾಮಾನ್ಯವಾಗಿ ಬೇಸಿಗೆಯ ಏಪ್ರಿಲ್-ಮೇ ತಿಂಗಳಲ್ಲಿ ಟೊಮೆಟೋ ಬೆಲೆ ಏರುತ್ತದೆ. 12 ಕೇಜಿ ಬಾಕ್ಸ್‌ನ ಸಗಟು ದರವೇ ₹480 ಇತ್ತು. ಈ ಬಾರಿ, ಮಳೆ ಮತ್ತು ಮೋಡ ಕವಿದ ವಾತಾವರಣ ಮತ್ತು ಚಳಿಗಾಲದಿಂದ ಬೆಳೆ ಹಾಳಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಬೆಲೆ ಇನ್ನಷ್ಟು ಹೆಚ್ಚುವ ಸಾಧ್ಯತೆಯೂ ಇದೆ ಎಂದು ವ್ಯಾಪಾರಿಗಳು ಹೇಳಿದರು.