Wednesday, August 17, 2022

Latest Posts

ಉಡುಪಿಗೆ ಆಸ್ಕರ್ ಪಾರ್ಥಿವ ಶರೀರ: ಅಂತಿಮ‌ ನಮನ ಸಲ್ಲಿಸಿದ ಸಚಿವ ಕೋಟ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಉಡುಪಿ:

ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ, ರಾಜ್ಯ ಸಭಾ ಸದಸ್ಯರಾಗಿದ್ದ ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥಿವ ಶರೀರ ಇಂದು ಬೆಳಗ್ಗೆ ಮಂಗಳೂರಿನಿಂದ ಉಡುಪಿಗೆ ಆಗಮಿಸಿತು. ಉಡುಪಿ ಶೋಕ ಮಾತಾ ಇಗರ್ಜಿಗೆ ಆಗಮಿಸಿದ ಪಾರ್ಥಿವ ಶರೀರಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅಂತಿಮ‌ ನಮನ ಸಲ್ಲಿಸಿದರು.
ಬಳಿಕ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ. ಜೆರಾಲ್ಡ್ ಐಸಾಕ್ ಲೋಬೊ ನೇತೃತ್ವದಲ್ಲಿ ಬಲಿಪೂಜೆ ನೆರವೇರಿಸಲಾಯಿತು. ಬಳಿಕ ಧರ್ಮಪ್ರಾಂತ್ಯದ ಪರವಾಗಿ ಅಂತಿಮ ಗೌರವ ಸಲ್ಲಿಸಲಾಯಿತು. ಈ ಹಿನ್ನೆಲೆಯಲ್ಲಿ ಚಚ್೯ ಆವರಣದಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಯಿತು.
ನಂತರ ಬ್ರಹ್ಮಗಿರಿಯ ಅವರ ಮನೆಗೆ ಕರೆದೊಯ್ಯಲಾಯಿತು. ಅಲ್ಲಿಯೂ ಮಣಿಪಾಲ ಕ್ರೈಸ್ಟ್ ಚರ್ಚ್‌ನ ಧರ್ಮಗುರು ಫೆಡ್ರಿಕ್ ಧಾರ್ಮಿಕ ವಿಧಿಗಳನ್ನು ನೆರವೇರಿಸಿದರು.
ಈ ವೇಳೆ ಪತ್ನಿ ಬ್ಲೋಸಂ ಫೆರ್ನಾಂಡಿಸ್, ಸಹೋದರಿಯರಾದ ಜುಡಿತ್ ಶ್ರೇಷ್ಠ, ಸಾಲಿಯಟ್ ಮತ್ತು ಮರಿಯಟ್, ಮಕ್ಕಳು ಓಶನ್ ಮತ್ತು ಓಶಾನಿ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ವಿನಯ ಕುಮಾರ್ ಸೊರಕೆ, ಶಾಸಕ ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಚಂದ್ರ ಶೆಟ್ಟಿ, ಮಾಜಿ ಶಾಸಕ ಜೆ.ಆರ್.ಲೋಬೊ, ಐವನ್ ಡಿಸೋಜ, ಎಂ.ಎ. ಗಫೂರ್ ಮೊದಲಾದವರು ಹಾಜರಿದ್ದರು. ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ, ಬಿಜೆಪಿ ನಾಯಕರು ಅಂತಿಮ ದರ್ಶನ ಪಡೆದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!