ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಳೆ ಮತ್ತು ನಾಡಿದ್ದು ಗೌರಿ ಗಣೇಶ ಹಬ್ಬ, ನಂತರ ಮುಂದಿನ ತಿಂಗಳು ದಸರಾ ಹಾಗೂ ದೀಪಾವಳಿ ಹಬ್ಬಗಳು ಬರುತ್ತಿವೆ. ನಾಡಿನಾದ್ಯಂತ ಆಚರಿಸುವ ಈ ಹಬ್ಬಗಳ ರಜೆಗಳು, ಜನರ ಪ್ರಯಾಣ, ಓಡಾಟ ಹೆಚ್ಚಾಗಿರುವ ಕಾರಣ ನೈಋತ್ಯ ರೈಲ್ವೆ ಇಲಾಖೆ ರಾಜ್ಯಾದ್ಯಂತ 22 ವಿಶೇಷ ರೈಲುಗಳನ್ನು ಘೋಷಣೆ ಮಾಡಿದೆ. ವಿಶೇಷ ರೈಲುಗಳ ವೇಳಾಪಟ್ಟಿ, ಪ್ರಯಾಣದ ಸಮಯಗಳನ್ನು ಕೂಡ ಹಂಚಿಕೊಂಡಿದೆ.
ಪ್ರಯಾಣಿಕರ ವಿಶೇಷ ಗಮನಕ್ಕೆ:
ಗಣೇಶ ಚತುರ್ಥಿ, ದೀಪಾವಳಿ ಮತ್ತು ದಸರಾ ಹಬ್ಬದ ವೇಳೆ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು ನೈಋತ್ಯ ರೈಲ್ವೆಯು ವಿವಿಧ ಸ್ಥಳಗಳ ನಡುವೆ ಇಪ್ಪತ್ತೆರಡು ಹಬ್ಬದ ವಿಶೇಷ ರೈಲುಗಳನ್ನು ಓಡಿಸಲಾಗುತ್ತಿದೆ. ಅವುಗಳು ಈ ಕೆಳಗಿನಂತಿವೆ.#SWRupdates pic.twitter.com/CMvYHQfpZC— South Western Railway (@SWRRLY) September 4, 2024
ಇಂದು ಸೆಪ್ಟೆಂಬರ್ 5 ರಿಂದ 7 ರವರೆಗೆ ಬೆಂಗಳೂರು ಮತ್ತು ಕಲಬುರಗಿ ನಡುವೆ ವಿಶೇಷ ರೈಲುಗಳ ಸಂಚಾರ ನಡೆಸಲಿದೆ. ಬೆಂಗಳೂರು ಕಲಬುರಗಿ ವಿಶೇಷ ರೈಲು ಎಸ್ಎಂವಿಟಿ ಬೆಂಗಳೂರಿನಿಂದ ರಾತ್ರಿ 9:15 ಕ್ಕೆ ಹೊರಟು ಮರುದಿನ ಬೆಳಿಗ್ಗೆ 7:40 ಕ್ಕೆ ಕಲಬುರಗಿಗೆ ತಲುಪಲಿದೆ. ಅದೇ ರೀತಿ, ಸೆಪ್ಟೆಂಬರ್ 6 ರಿಂದ 8 ರವರೆಗೆ, ಕಲಬುರಗಿಯಿಂದ ಹಿಂತಿರುಗುವ ರೈಲು ಬೆಳಿಗ್ಗೆ 9:35 ಕ್ಕೆ ಹೊರಟು ಅದೇ ದಿನ ರಾತ್ರಿ 8:00 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪುತ್ತದೆ.
ಗಣೇಶ ಚತುರ್ಥಿ, ದೀಪಾವಳಿ ಮತ್ತು ದಸರಾ ಹಬ್ಬದ ವೇಳೆ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು ನೈಋತ್ಯ ರೈಲ್ವೆಯು ವಿವಿಧ ಸ್ಥಳಗಳ ನಡುವೆ ಇಪ್ಪತ್ತೆರಡು ಹಬ್ಬದ ವಿಶೇಷ ರೈಲುಗಳನ್ನು ಓಡಿಸಲಾಗುತ್ತಿದೆ.
ಅಕ್ಟೋಬರ್ 30 ಮತ್ತು ನವೆಂಬರ್ 2 ರಂದು ಮೈಸೂರು ಮತ್ತು ವಿಜಯಪುರ ನಡುವೆ ವಿಶೇಷ ರೈಲುಗಳು ಕಾರ್ಯನಿರ್ವಹಿಸಲಿವೆ. ವಿಜಯಪುರದಿಂದ ಮೈಸೂರಿಗೆ ಹಿಂದಿರುಗುವ ರೈಲು ಅಕ್ಟೋಬರ್ 31 ಮತ್ತು ನವೆಂಬರ್ 3 ರಂದು ಸಂಚರಿಸಲಿದೆ. ಜತೆಗೆ, ಅಕ್ಟೋಬರ್ 30 ರಂದು ಯಶವಂತಪುರ ಮತ್ತು ಬೆಳಗಾವಿ ನಡುವೆ ವಿಶೇಷ ರೈಲುಗಳು ಸಂಚರಿಸಲಿವೆ. ನವೆಂಬರ್ 1, ಅಕ್ಟೋಬರ್ 31 ಮತ್ತು ನವೆಂಬರ್ 3 ರಂದು ಹಿಂದಿರುಗಲಿವೆ.