ಹೊಸದಿಗಂತ ಡಿಜಿಟಲ್ ಡೆಸ್ಕ್:
ಭ್ರೂಣ ಹತ್ಯೆ ಪ್ರಕರಣದ ಬಗ್ಗೆ ಸಿಐಡಿ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ ಮಾಡಿದ್ದಾರೆ.
ಈ ಕುರಿತು ಮುಖ್ಯಮಂತ್ರಿಗಳು ದೂರವಾಣಿ ಮೂಲಕ ಗೃಹ ಸಚಿವರಿಗೆ ಸೂಚಿಸಿದ್ದಾರೆ ಅಂತ ತಿಳಿದು ಬಂದಿದೆ. ಈ ನಡುವೆ ಹತ್ಯೆ ಪ್ರಕರಣಗಳ ಜಾಲವನ್ನು ಪತ್ತೆ ಹಚ್ಚಿರುವ ಪೊಲೀಸರು ಈವರೆಗೆ 9 ಮಂದಿ ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸಿದ್ದು, ಸುಮಾರು ಒಂದೂವರೆ ಸಾವಿರಕ್ಕೂ ಅಧಿಕ ಭ್ರೂಣ ಹತ್ಯೆ ಮಾಡಿದ್ದಾರೆ.
ಇದರ ಬೆನ್ನಲ್ಲಿಯೇ ಬೆಂಗಳೂರು, ಮೈಸೂರು ಹಾಗೂ ಮಂಡ್ಯ ಜಿಲ್ಲೆಯನ್ನು ಕೆಲವರನ್ನು ಒಳಗೊಂಡ ತಂಡವು ಬೆಲ್ಲ ತಯಾರಿಸುವ ಆಲೆಮನೆಯಲ್ಲಿ ಭ್ರೂಣ ಪರೀಕ್ಷೆ ಹಾಗೂ ಹೆಣ್ಣು ಭ್ರೂಣ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ CID ತನಿಖೆಗೆ ಒಪ್ಪಿಸಿದೆ. ಈ ಕುರಿತು ಮುಖ್ಯಮಂತ್ರಿಗಳು ದೂರವಾಣಿ ಮೂಲಕ ಗೃಹ ಸಚಿವರಿಗೆ ಸೂಚಿಸಿದ್ದಾರೆ.