ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಹೊಸಕೋಟೆಯ ಎಸ್ ಪಿಜಿ ಅಸ್ಪತ್ರೆಯಲ್ಲಿ ಭ್ರೂಣಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ನಾಲ್ವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಬೆಂಗಳೂರು ಗ್ರಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿಯ ಎಸ್ ಪಿಜಿ ಆಸ್ಪತ್ರೆಯಲ್ಲಿ ನಡೆದಿದ್ದ ಭ್ರೂಣಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
ಅನಿತಾ, ನೇತ್ರಾ, ರೇವತಿ ಹಾಗೂ ರಾಧಿಕಾ ಅವರನ್ನು ಇಂದು ಪೊಲೀಸರು ಹೊಸಕೋಟೆ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಆರೊಪಿಗಳನ್ನು 7 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ನೀಡಿದೆ.